ಯಾದಗಿರಿ : ರಾಜ್ಯದಲ್ಲಿ ಸರ್ಕಾರ ಹಾಗೂ ಆರ್ ಎಸ್ ಎಸ್ ವಿರುದ್ಧ ಸಮರ ಮುಂದುವರೆದಿದ್ದು, ಕಲ್ಬುರ್ಗಿ ಜಿಲ್ಲೆಯ ಚಿತ್ತಾಪುರದಲ್ಲಿ ಆರ್ ಎಸ್ ಎಸ್ ಪಥ ಸಂಚಲಕ್ಕೆ ಜಿಲ್ಲಾಡಳಿತ ಬ್ರೇಕ್ ಹಾಕಿತ್ತು. ಈ ವಿಚಾರ ಆರ್ ಎಸ್ ಎಸ್ ಮುಖಂಡರು ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದು, ಕಲ್ಬುರ್ಗಿ ಹೈಕೋರ್ಟ್ ನಲ್ಲಿ ವಿಚಾರಣೆ ನಡೆಯುತ್ತಿದೆ.ಇದರ ಮಧ್ಯ ಯಾದಗಿರಿ ಜಿಲ್ಲೆಯ ಗುರುಮಿಠಕಲ್ ನಲ್ಲಿ ಇಂದು ಆರ್ ಎಸ್ ಎಸ್ ಪಥ ಸಂಚಲನಕ್ಕೆ ಬ್ರೇಕ್ ಹಾಕಲಾಗಿದೆ.
ಹೌದು ಗುರುಮಿಠಕಲ್ ಆರ್ ಎಸ್ ಎಸ್ ಪಥ ಸಂಚಲನಕ್ಕೆ ಬ್ರೇಕ್ ಹಾಕಲಾಗಿದೆ. ಯಾದಗಿರಿ ಜಿಲ್ಲೆಯಲ್ಲಿ ಇಂದು ಆರ್ ಎಸ್ ಎಸ್ ಪಥಸಂಚಲನ ನಡೆಯಬೇಕಿತ್ತು. ಆರ್ ಎಸ್ ಎಸ್ ಪಥ ಸಂಚಲನಕ್ಕೆ ಜಿಲ್ಲಾಡಳಿತ ಅನುಮತಿ ನೀಡಿಲ್ಲ. ಯಾದಗಿರಿ ಜಿಲ್ಲಾಧಿಕಾರಿ ಹರ್ಷಲ್ ಬೋಯರ್ ಪತಸಂಚಲಕ್ಕೆ ಅನುಮತಿ ನಿರಾಕರಿಸಿದ್ದಾರೆ. ಮೂರು ದಿನ ಮೊದಲೇ ಅರ್ಜಿ ಸಲ್ಲಿಸಬೇಕು ಎಂದು ಜಿಲ್ಲಾಧಿಕಾರಿ ಸ್ಪಷ್ಟನೆ ನೀಡಿದ್ದಾರೆ. ಸರ್ಕಾರಿ ಪ್ರಾಧಿಕಾರ ಆಸ್ತಿಗಳು ಮತ್ತು ಆವರಣ ಬಳಸಬೇಕಾದರೆ ಲಿಖಿತ ಅರ್ಜಿ ಸಲ್ಲಿಸಬೇಕು ಮೂರು ದಿನ ಮೊದಲು ಅರ್ಜಿ ಸಲ್ಲಿಸಿಲ್ಲ ಹಾಗಾಗಿ ಅನುಮತಿ ನಿರಾಕರಿಸಲಾಗಿದೆ ಎಂದು ಜಿಲ್ಲಾಧಿಕಾರಿ ಹರ್ಷಲ್ ಬೋಯೆರ್ ಸ್ಪಷ್ಟಪಡಿಸಿದ್ದಾರೆ.








