ಯಲ್ಲಾಪುರ: ಮದುವೆಗೆ ಒಪ್ಪದಿದ್ದಕ್ಕೆ ವಿಚ್ಛೇದಿತ ಮಹಿಳೆಯ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಆರೋಪಿ ರಫೀಕ್ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ.
ಯಲ್ಲಾಪುರ ಪಟ್ಟಣದ ಕಾಳಮ್ಮನಗರದ ಮಾರ್ಕೋಜಿ ದೇವಸ್ಥಾನದ ಬಳಿ ಶನಿವಾರ ಸಂಭವಿಸಿದ್ದು ಗಾಯಾಳು ಮಹಿಳೆ ಚಿಕಿತ್ಸೆ ಫಲಿಸದೆ ಮೃತಪಟ್ಟಿರುತ್ತಾಳೆ. ರಂಜಿತಾ ಮಲ್ಲಪ್ಪ ಬನಸೋಡೆ (30) ಮೃತ ಮಹಿಳೆ.
ರಂಜಿತಾ ರಾಮಾಪುರ ಶಾಲೆಯಲ್ಲಿಅಡುಗೆ ಕೆಲಸ ಮಾಡುತ್ತಿದ್ದರು. ಶನಿವಾರ ಮಧ್ಯಾಹ್ನದ ಕೆಲಸ ಮುಗಿಸಿ ಮಗನಿಗೆ ತಿಂಡಿ ತೆಗೆದುಕೊಂಡು ಮನೆಗೆ ಹೋಗುತ್ತಿರುವಾಗ ದಾರಿಯಲ್ಲಿ ಕಾದು ಕುಳಿತಿದ್ದ ಸೆಂಟರಿಂಗ್ ಕೆಲಸದ ರಫೀಕ ಯಳ್ಳೂರ ಎಂಬಾತ ಆಕೆಯ ಕುತ್ತಿಗೆಗೆ ಚಾಕುವಿನಿಂದ ಹಲ್ಲೆ ಮಾಡಿದ. ಗಂಭೀರವಾಗಿ ಗಾಯಗೊಂಡ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದರು. ಇದೀಗ ರಫೀಕ್ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ.








