ಬೆಂಗಳೂರು : ರಾಜ್ಯದಲ್ಲಿ ಗೌರಿ ಗಣೇಶ ಹಬ್ಬ ಹಾಗೂ ಈದ್ ಮಿಲಾದ್ ಆಚರಣೆ ಪೂರ್ಣಗೊಳ್ಳುವವರೆಗೆ ರಾಜ್ಯದಲ್ಲಿ ಡಿಜೆ ಸಿಸ್ಟಂ ಬಳಕೆ ನಿಷೇಧಗೊಳಿಸುವಂತೆ ರಾಜ್ಯ ಸರ್ಕಾರ ಖಡಕ್ ಆದೇಶ ಹೊರಡಿಸಿದೆ.
ರಾಜ್ಯದಲ್ಲಿ ದಿನಾಂಕ: 07.09.2024 ರಂದು ಗಣೇಶ ಹಬ್ಬದ ಪ್ರಯುಕ್ತ ಸಾರ್ವಜನಿಕ ಸ್ಥಳಗಳಲ್ಲಿ ಗಣೇಶ ಮೂರ್ತಿಗಳನ್ನು ಪ್ರತಿಷ್ಠಾಪಿಸಿ, ನಂತರ, ವಿವಿಧ ದಿನಗಳಂದು ವಿಸರ್ಜನಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಿದ್ದು, ಹಾಗೂ ದಿನಾಂಕ: 16.09.2024 ರಂದು ರಾಜ್ಯಾದ್ಯಂತ ಮುಸ್ಲಿಂ ಬಾಂದವರು ಈದ್ ಮಿಲಾದ್ ಹಬ್ಬವನ್ನು ಆಚರಿಸಲಿದ್ದು, ಈ ಸಂಬಂಧ ಗಣೇಶ ಮತ್ತು ಈದ್ ಮಿಲಾದ್ ಹಬ್ಬಗಳ ಆಚರಣೆ ಸಂದರ್ಭಗಳಲ್ಲಿ ಡಿಜೆ ಸಿನ್ನಂಗಳನ್ನು ಉಪಯೋಗಿಸುವುದರಿಂದ ಸಾರ್ವಜನಿಕರಿಗೆ, ವಿದ್ಯಾರ್ಥಿಗಳಿಗೆ, ವಯಸ್ಕರಿಗೆ, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುವ ರೋಗಿಗಳಿಗೆ ತೊಂದರೆಯಾಗುವುದರೊಂದಿಗೆ, ಕಾನೂನು ಸುವ್ಯವಸ್ಥೆಗೆ ಧಕ್ಕೆಯುಂಟಾಗುವ ಸಾಧ್ಯತೆ ಇರುವುದರಿಂದ, ಸಾರ್ವಜನಿಕ ಹಿತದೃಷ್ಟಿಯಿಂದ, ಸೌಹಾರ್ದತೆ & ಶಾಂತಿ ಕಾಪಾಡುವ ಸಲುವಾಗಿ ಗಣೇಶೋತ್ಸವ ಮತ್ತು ಈದ್ ಮಿಲಾದ್ ಹಬ್ಬದ ಆಚರಣೆಗಳು ಪೂರ್ಣಗೊಳ್ಳುವವರೆಗೆ ಡಿಜೆ ಸಿಸ್ಟಂ ನಿಷೇಧಿಸುವಂತೆ ಆಯಾ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಲು ರಾಜ್ಯ ಸರ್ಕಾರ ಸೂಚಿಸಿದೆ.