ಬೆಂಗಳೂರು : ನಿನ್ನೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೈಸೂರು ಜಿಲ್ಲೆಯ ಟಿ ನರಸೀಪುರ ತಾಲೂಕಿನಲ್ಲಿ, ಕಾರ್ಯಕ್ರಮ ಒಂದರಲ್ಲಿ ಮಾತನಾಡಿ ಕಾಂಗ್ರೆಸ್ ನ 50 ಶಾಸಕರಿಗೆ ತಲಾ ಒಂದೊಂದು ಕೋಟಿಯಂತೆ 50 ಕೋಟಿ ಆಫರ್ ನೀಡಿದೆ ಎಂದು ಹೇಳಿಕೆ ನೀಡಿದ್ದರು. ಇದಕ್ಕೆ ಡಿಸಿಎಂ ಡಿಕೆ ಶಿವಕುಮಾರ್ ಹೌದು ಸರ್ಕಾರ ಕೆಡುವಲು ಪ್ರಯತ್ನಿಸುತ್ತಿದ್ದಾರೆ ಎಂದು ಸಿಎಂ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ.
ಬೆಂಗಳೂರಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಹೌದು ಸರ್ಕಾರ ಕೆಡುವಲು ಪ್ರಯತ್ನ ಮಾಡುತ್ತಿದ್ದಾರೆ. ಈ ಕುರಿತು ಎಲ್ಲಾ ಶಾಸಕರ ಜೊತೆಗೆ ಸಿಎಂ ಸಿದ್ದರಾಮಯ್ಯ ಮಾತನಾಡಿದ್ದಾರೆ. ಶಾಸಕರು ಬಂದು ನಮಗೆ ಈ ಕುರಿತು ತಿಳಿಸಿದ್ದಾರೆ. ಉಳಿದ ವಿಚಾರಣೆ ಆಮೇಲೆ ಮಾತಾಡುತ್ತೇನೆ ಎಂದು ಬೆಂಗಳೂರಿನಲ್ಲಿ ಉಪಮುಖ್ಯಮಂತ್ರಿಯ ಡಿಕೆ ಶಿವಕುಮಾರ್ ತಿಳಿಸಿದರು.