ಬೆಂಗಳೂರು: ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಇಂದು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಈ ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗುವಂತೆ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಡಿ.ಕೆ. ಶಿವಕುಮಾರ್ ಅವರು ಅಧಿಕೃತವಾಗಿ ಆಹ್ವಾನ ನೀಡಿದ್ದಾರೆ.
ಇಂದು ಬೆಳಗ್ಗೆ ಡಾ. ಜಿ. ಪರಮೇಶ್ವರ್ ಅವರೊಂದಿಗೆ ಡಾಲರ್ಸ್ ಕಾಲೋನಿಯಲ್ಲಿರುವ ಬಿ.ಎಸ್. ಯಡಿಯೂರಪ್ಪ ನಿವಾಸಕ್ಕೆ ತೆರಳಿದ ಡಿ.ಕೆ. ಶಿವಕುಮಾರ್, ಆಹ್ವಾನ ಪತ್ರಿಕೆ ನೀಡಿ ಕಾರ್ಯಕ್ರಮಕ್ಕೆ ಬರುವಂತೆ ಆತ್ಮೀಯವಾಗಿ ಆಮಂತ್ರಿಸಿದರು.
ಇದೀಗ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ಮನೆಗೆ ಭೇಟಿ ನೀಡಿ ಅವರನ್ನೂ ಆಹ್ವಾನಿಸಲಾಗುವುದು ಎಂದು ತಿಳಿಸಿದ್ದಾರೆ.








