ನವದೆಹಲಿ : ರಾಜ್ಯದಲ್ಲಿ ಯಾವಾಗ ಕುರ್ಚಿ ಕಾದಾಟ ಜೋರಾಯಿತೊ ಆಗ ಸಿಎಂ ಸಿದ್ದರಾಮಯ್ಯ ಅಭಿಮಾನಿಗಳು ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಅಭಿಮಾನಿಗಳು ದೇವಸ್ಥಾನಕ್ಕೆ ಹರಕೆ ಕಟ್ಟಿಕೊಳ್ಳುವುದು, ಈಡುಗಾಯಿ ಒಡೆಯುವುದು ಸಾಮಾನ್ಯವಾಗಿ ನಡೆದೇ ಇತ್ತು. ಇದೀಗ ರಾಜ್ಯ ಬಿಟ್ಟು ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಕೂಡ ಡಿಸಿಎಂ ಡಿಕೆ ಶಿವಕುಮಾರ್ ಅವರ ಅಭಿಮಾನಿಗಳು ನೆಕ್ಸ್ಟ್ ಸಿಎಂ ಡಿಕೆ ಶಿವಕುಮಾರ್ ಗೆ ಜೈ ಎಂದು ಘೋಷಣೆ ಕೂಗಿದರು.
ಇಂದು ದೆಹಲಿಯಲ್ಲಿ ವೋಟ್ ಚೋರಿ ಅಭಿಯಾನ ನಡೆಯುತ್ತಿದ್ದು ಈ ಒಂದು ಅಭಿಯಾನದಲ್ಲಿ ಸಿಎಂ ಸಿದ್ದರಾಮಯ್ಯ ಡಿಸಿಎಂ ಶಿವಕುಮಾರ್ ಸೇರಿದಂತೆ ಕಾಂಗ್ರೆಸ್ ಪಕ್ಷದ ಎಲ್ಲಾ ನಾಯಕರು ಭಾಗವಹಿಸಲಿದ್ದಾರೆ. ಹಾಗಾಗಿ ಸಿಎಂ ಸಿದ್ದರಾಮಯ್ಯ ಡಿಕೆ ಶಿವಕುಮಾರ್ ದೆಹಲಿಗೆ ತೆರಳಿದ್ದು ಈ ಸಂದರ್ಭದಲ್ಲಿ ಡಿಕೆ ಶಿವಕುಮಾರ್ ಅವರ ಬೆಂಬಲಿಗರು ಅಭಿಮಾನಿಗಳು ಹಾಗೂ ಕಾರ್ಯಕರ್ತರು ಮುಂದಿನ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರಿಗೆ ಜೈ ಎಂದು ಘೋಷಣೆ ಕೂಗಿದರು.








