ಬೆಂಗಳೂರು : ಹೊಸ ವರ್ಷ ಶರಣೀಯ ಸಂದರ್ಭದಲ್ಲಿ ವಿದೇಶ ಪ್ರವಾಸ ಮುಗಿಸಿಕೊಂಡು ಭಾರತಕ್ಕೆ ಆಗಮಿಸಿರುವ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು, ರಾಜ್ಯ ರಾಜಕಾರಣದಲ್ಲಿ ಹಲವು ಬದಲಾವಣೆ ಹಾಗೂ ಪಕ್ಷದ ಗೊಂದಲದ ನಡುವೆ ಅವರು ಇದೀಗ ದೇವರ ಮೊರೆ ಹೋಗಿದ್ದಾರೆ ಎನ್ನಲಾಗಿದೆ.
ಹೌದು ಪಕ್ಷದೊಳಗಿನ ಗೊಂದಲದ ನಡುವೆ ಡಿಕೆ ಶಿವಕುಮಾರ್ ಅವರು ದೇವರ ಮೊರೆ ಹೋಗಿದ್ದಾರೆ. ಡಿಸಿಎಂ ಡಿಕೆ ಶಿವಕುಮಾರ್ ನಾಳೆ ಬೆಳಿಗ್ಗೆ 8 ಗಂಟೆಗೆ ತಮಿಳುನಾಡಿಗೆ ತೆರಳಲ್ಲಿದ್ದಾರೆ. ಪ್ರತ್ಯಂಗಿರ ದೇವಿಯ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಲಿದ್ದಾರೆ ಎಂದು ಬಲ್ಲ ಮೂಲಗಳಿಂದ ತಿಳಿದುಬಂದಿದೆ.
ಬೆಂಗಳೂರಿನಿಂದ ಕುಂಭಕೋಣಂಗೆ ಡಿಕೆ ಶಿವಕುಮಾರ್ ತೆರಳಲ್ಲಿದ್ದು, ತಮಿಳುನಾಡಿನ ಕುಂಭಕೋಣಂ ನ ಪ್ರತ್ಯಂಗಿರ ದೇವಿ ದೇವಸ್ಥಾನದಲ್ಲಿ ಡಿಕೆ ಶಿವಕುಮಾರ್ ವಿಶೇಷ ಪೂಜೆ ಸಲ್ಲಿಸಲಿದ್ದಾರೆ. ಡಿನ್ನರ್ ಮೀಟಿಂಗ್ ಸೇರಿದಂತೆ ಹಲವು ಗೊಂದಲಗಳು ಪಕ್ಷದಲ್ಲಿ ಇರುವ ಕಾರಣ ದೇವಿಗೆ ವಿಶೇಷ ಪೂಜೆ ಸಲ್ಲಿಸಲಿದ್ದಾರೆ ಎನ್ನಲಾಗಿದೆ.