ಬೆಂಗಳೂರು : ಡಿಕೆ ಶಿವಕುಮಾರ್ ಪಟ್ಟಾಭಿಷೇಕಕ್ಕೆ ಈಗಾಗಲೇ ಭರದ ಸಿದ್ಧತೆ ನಡೆದಿದ್ದು, ಇದೀಗ ರಾಜ್ಯಪಾಲರನ್ನು ಭೇಟಿಯಾಗಿರುವ ಡಿ.ಕೆ.ಶಿವಕುಮಾರ್ ಅವರು ಜೂನ್.1 ಅಥವಾ ಜೂನ್ 5ಕ್ಕೆ ಪ್ರಮಾಣವಚನ ಸ್ವೀಕರಿಸುವ ದಿನಾಂಕ ಕೇಳಿದ್ದಾರೆ.
ಶಾಸಕಾಂಗ ಪಕ್ಷದ ಸಭೆಗೂ ಮುನ್ನವೇ ಡಿ.ಕೆ. ಶಿವಕುಮಾರ್ ಲೋಕಭವನಕ್ಕೆ ತೆರಳಿ ರಾಜ್ಯಪಾಲರನ್ನು ಭೇಟಿಯಾಗಿದ್ದಾರೆ. ಪ್ರಮಾಣವಚನ ಸ್ವೀಕಾರಕ್ಕೆ ಸಮಯಾವಕಾಶ ಕೇಳಿದ್ದಾರೆ ಎಂದು ತಿಳಿದುಬಂದಿದೆ. ಸಿಎಲ್ ಪಿ ಸಭೆ ಸಂಜೆ ಇಂದು 4 ಗಂಟೆಗೆ ಆರಂಭವಾಗಲಿದ್ದು, ಸಂಜೆ 6 ಗಂಟೆಯವರೆಗೂ ನಡೆಯಲಿದೆ. ಮಧ್ಯಾಹ್ನ 1 ಗಂಟೆಯ ನಂತರ ರಾಜ್ಯಪಾಲರು ಧರ್ಮಸ್ಥಳಕ್ಕೆ ತೆರಳಲಿರುವ ಕಾರಣ, ಅವರು ಸಿಗುವುದಿಲ್ಲ. ಸಂಜೆ ಕೂಡ ರಾಜ್ಯಪಾಲರು ಅನುಪಸ್ಥಿತರಿರಲಿದ್ದಾರೆ. ಹಾಗಾಗಿ ಡಿ.ಕೆ.ಶಿವಕುಮಾರ್ ಸಿಎಲ್ ಪಿ ಸಭೆಗೂ ಮುನ್ನ ಲೋಕಹವನಕ್ಕೆ ತೆರಳಿ ರಾಜ್ಯಪಾಲರನ್ನು ಭೇಟಿಯಾಗಿ ಚರ್ಚಿಸಿದ್ದಾರೆ. ರಾಜ್ಯಪಾಲರ ಬಳಿ ಎರಡು ದಿನಾಂಕವನ್ನು ಡಿ.ಕೆ.ಶಿವಕುಮಾರ್ ಪ್ರಸ್ತಾಪಿಸಿದ್ದಾರೆ. ಜೂನ್ 1 ಅಥವಾ ಜೂನ್ 5ರಂದು ಪ್ರಮಾಣವಚನ ಸ್ವೀಕರಿಸುವ ಬಗ್ಗೆ ಪ್ರಸ್ತಾಪಿಸಿದ್ದಾರೆ ಎಂದು ತಿಳಿದುಬಂದಿದೆ.
ಅಂದುಕೊಂಡಂತೆ ಜೂನ್ 1 ಅಥವಾ ಜೂನ್ 5 ರಂದು ವಿಧಾನಸೌಧದ ಗ್ರಾಂಡ್ ಸ್ಟೆಪ್ಸ್ ಮೇಲೆ ಡಿಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ಹೇಳಲಾಗಿತ್ತು. ಆದರೆ ಇದೀಗ ಸ್ವಲ್ಪ ಕಾರ್ಯಕ್ರಮದಲ್ಲಿ ಬದಲಾವಣೆಯಾಗಿದ್ದು ರಾಜಭವನದಲ್ಲಿಯೇ ಡಿಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.
ಹೌದು ಜೂನ್,1 ಅಥವಾ ಜೂನ್ 5ಕ್ಕೆ ಡಿಕೆ ಶಿವಕುಮಾರ್ ರಾಜಭವನದಲ್ಲಿ ಪ್ರಮಾಣವಚನ ಸ್ವೀಕರಿಸುವ ಸಾಧ್ಯತೆ ಇದೆ ವಿಧಾನಸೌಧ ಗ್ರಾಂಡ್ ಸ್ಟೆಪ್ಸ್ ಮೇಲೆ ಪ್ರಮಾಣವಚನ ಸ್ವೀಕಾರ ಸಮಾರಂಭಕ್ಕೆ ನಿರ್ಧರಿಸಲಾಗಿತ್ತು. ಇದೀಗ ಅಲ್ಲಿ ಕಾರ್ಯಕ್ರಮ ರದ್ದಾಗುವ ಸಾಧ್ಯತೆ ಇದೆ. ಏಕೆಂದರೆ ಈ ಒಂದು ಕಾರ್ಯಕ್ರಮದಲ್ಲಿ ಹೆಚ್ಚು ಜನ ಸೇರುವ ಸಾಧ್ಯತೆ ಹಿನ್ನಲೆಯಲ್ಲಿ ಪ್ರಮಾಣವಚನ ಸ್ವೀಕಾರ ಸಮಾರಂಭವನ್ನು ಲೋಕಭವನದಲ್ಲಿಯೇ ನಡೆಸಲು ನಿರ್ಧರಿಸಲಾಗಿದೆ.
ಹೆಚ್ಚು ಜನ ಸೇರಿದರೆ ಅಹಿತಕರ ಘಟನೆ ನಡೆಯುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಲೋಕಭವನದಲ್ಲಿಯೇ ಡಿಕೆ ಶಿವಕುಮಾರ್, ಪ್ರಮಾಣವಚನ ಸ್ವೀಕಾರ ಮಾಡುವ ಸಾಧ್ಯತೆ ಇದೆ ಎಂದು ಬಲ್ಲಮೂಲಗಳಿಂದ ತಿಳಿದುಬಂದಿದೆ. ಡಿಕೆ ಸಾಂಗ್ ಶಿವಕುಮಾರ್ ಜೊತೆಗೆ 12 ರಿಂದ 14 ಸಚಿವರು ಪ್ರಮಾಣವಚನ ಸ್ವೀಕರಿಸುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ. ಮೊದಲ ಹಂತದಲ್ಲಿ ಹಿರಿಯ ನಾಯಕರು ಸಚಿವರಾಗಿ ಪದಗ್ರಹಣ ಮಾಡಲಿದ್ದು, ಸಿಎಂ ಪದಗ್ರಹಣ ಸಮಾರಂಭದ ವೇಳೆ ಹೆಚ್ಚು ಜನ ಸೇರುವ ಸಾಧ್ಯತೆ ಇದೆ ಹಾಗಾಗಿಯೇ ಲೋಕಭವನದಲ್ಲಿ ನೂತನ ಸಿಎಂ ಪದಗ್ರಹಣ ಸಮಾರಂಭಕ್ಕೆ ನಿರ್ಧರಿಸಲಾಗಿದೆ.








