ಬೆಳಗಾವಿ : ಇಂದು ಬೆಳಗಾವಿ ಹೆದ್ದಾರಿಯಲ್ಲಿ ಭೀಕರ ರಸ್ತೆ ಅಪಘಾತ ನಡೆದಿದ್ದು, ಟ್ರಕ್ ಗೆ ವೇಗವಾಗಿ ಬಂದಂತಹ ಕಾರೊಂದು ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಸ್ಥಳದಲ್ಲೇ ವೈದ್ಯೆ ಒಬ್ಬಳು ಸಾವನ್ನಪ್ಪಿರುವ ಘಟನೆ ನಡೆದಿದೆ.
ಮೃತ ವೈದ್ಯೆಯನ್ನು ಸಂಗನಕೇರಿ ಗ್ರಾಮದ ಡಾ. ಆಶಾ ಕೋಳಿ (32) ಎಂದು ತಿಳಿದುಬಂದಿದೆ. ಬೆಳಗಾವಿ ತಾಲೂಕಿನ ಹಿರೇಬಾಗೇವಾಡಿ ಬಳಿ ಈ ಒಂದು ಭೀಕರವಾದಂತಹ ಅಪಘಾತ ಸಂಭವಿಸಿದೆ. ಮುಂದೆ ಹೋಗುತ್ತಿದ್ದ ಟ್ರಕ್ಕಿಗೆ ಹಿಂದಿನಿಂದ ಕಾರು ಡಿಕ್ಕಿ ಹೊಡೆದಿದೆ.
ಈ ಒಂದು ಘಟನೆಯಲ್ಲಿ ವೈದಯ ಪತಿ ಡಾ.ಭೀಮಪ್ಪ ಕೋಳಿ ಹಾಗೂ ಕಾರು ಚಾಲಕ ಗಂಭೀರವಾಗಿ ಗಾಯಗೊಂಡಿದ್ದಾರೆ. ತಕ್ಷಣ ಗಾಯಾಳುಗಳಿಗೆ ಬೆಳಗಾವಿ ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಅಪಘಾತದ ಕುರಿತಂತೆ ಬಾಗೇವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.