ನವದೆಹಲಿ : ದೀಪಾವಳಿಯಂದು ಪ್ರಧಾನಿ ಮೋದಿ ಮತ್ತು ಡೊನಾಲ್ಡ್ ಟ್ರಂಪ್ ದೂರವಾಣಿ ಮೂಲಕ ಮಾತನಾಡಿದರು. ದೀಪಾವಳಿ ಶುಭಾಶಯಗಳಿಗಾಗಿ ಪ್ರಧಾನಿ ಮೋದಿ ಡೊನಾಲ್ಡ್ ಟ್ರಂಪ್ ಅವರಿಗೆ ಧನ್ಯವಾದ ಅರ್ಪಿಸಿದರು.
ಈ ಕುರಿತು ಟ್ವೀಟ್ ಮಾಡಿರುವ ಪ್ರಧಾನಿ ಮೋದಿ, ಅಧ್ಯಕ್ಷ ಟ್ರಂಪ್, ನಿಮ್ಮ ಫೋನ್ ಕರೆ ಮತ್ತು ಆತ್ಮೀಯ ದೀಪಾವಳಿ ಶುಭಾಶಯಗಳಿಗಾಗಿ ಧನ್ಯವಾದಗಳು. ಈ ಬೆಳಕಿನ ಹಬ್ಬದಂದು, ನಮ್ಮ ಎರಡೂ ಮಹಾನ್ ಪ್ರಜಾಪ್ರಭುತ್ವ ರಾಷ್ಟ್ರಗಳು ಜಗತ್ತನ್ನು ಬೆಳಗಿಸಲು ಮತ್ತು ಎಲ್ಲಾ ರೀತಿಯ ಭಯೋತ್ಪಾದನೆಯ ವಿರುದ್ಧ ಒಗ್ಗಟ್ಟಿನಿಂದ ನಿಲ್ಲಲು ಭರವಸೆಯ ದೀಪವಾಗಲಿ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.
ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಮಂಗಳವಾರ (ಸ್ಥಳೀಯ ಸಮಯ) ಶ್ವೇತಭವನದಲ್ಲಿ ದೀಪಾವಳಿ ಆಚರಣೆಯಲ್ಲಿ ಭಾಗವಹಿಸಿ ದೀಪಗಳನ್ನು ಬೆಳಗಿಸಿದರು. ಈ ಸಂದರ್ಭದಲ್ಲಿ ಅವರು ಭಾರತದ ಜನರಿಗೆ ಮತ್ತು ಭಾರತೀಯ-ಅಮೆರಿಕನ್ನರಿಗೆ ತಮ್ಮ ಆತ್ಮೀಯ ಶುಭಾಶಯಗಳನ್ನು ತಿಳಿಸಿದರು.
Thank you, President Trump, for your phone call and warm Diwali greetings. On this festival of lights, may our two great democracies continue to illuminate the world with hope and stand united against terrorism in all its forms.@realDonaldTrump @POTUS
— Narendra Modi (@narendramodi) October 22, 2025
#WATCH | Washington DC | US President Donald Trump says, "I love the people of India. We're working on some great deals between our countries. I spoke to Prime Minister Modi today and we just have a very good relationship. He's not going to buy much oil from Russia. He wants to… pic.twitter.com/BtdXfkz1eK
— ANI (@ANI) October 22, 2025
#WATCH | Washington DC | US President Donald Trump lights lamps at the White House on the occassion of Diwali
(Source: The White House) pic.twitter.com/fFBTU5KyMl
— ANI (@ANI) October 21, 2025