BREAKING : ಶಿವಮೊಗ್ಗದಲ್ಲಿ ಜೋಡಿ ಹತ್ಯೆ : ಹಳೆ ವೈಷಮ್ಯದ ಹಿನ್ನೆಲೆ ಮಾರಕಾಸ್ತ್ರಗಳಿಂದ ಕೊಚ್ಚಿ ಭೀಕರ ಕೊಲೆ
ಶಿವಮೊಗ್ಗ : ಹಳೆ ವೈಶಮ್ಯದ ಹಿನ್ನೆಲೆಯಲ್ಲಿ ಇಬ್ಬರು ವ್ಯಕ್ತಿಗಳನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ, ತಲೆಯ ಮೇಲೆ ಕಲ್ಲು ಎತ್ತಿಹಾಕಿ ಭೀಕರವಾಗಿ ಕೊಲೆಗೈದಿರುವ ಘಟನೆ ಶಿವಮೊಗ್ಗ ನಗರದ ಲಷ್ಕರ್ ಮೊಹಲ್ಲಾದಲ್ಲಿ ನಡೆದಿದೆ. ಮಾರಕಸ್ತ್ರಗಳಿಂದ ಕೊಚ್ಚಿ ತಲೆಯ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ ಮಾಡಲಾಗಿದೆ ಎಂದು ಹೇಳಲಾಗುತ್ತಿದ್ದು, ಮಹಮ್ಮದ್ ಗೌಸ್ (30) ಶೋಯಬ್ (35) ಎನ್ನುವ ವ್ಯಕ್ತಿಗಳನ್ನು ಬರ್ಬರವಾಗಿ ಕೊಲೆ ಮಾಡಲಾಗಿದೆ. ಘಟನಾ ಸ್ಥಳಕ್ಕೆ ಕೋಟೆ ಠಾಣೆಯ ಪೊಲೀಸರು ಬೇಟೆ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
Copy and paste this URL into your WordPress site to embed
Copy and paste this code into your site to embed