ನವದೆಹಲಿ : ಸಂವಿಧಾನ ಶಿಲ್ಪಿ ಡಾ.ಬಿ ಆರ್. ಅಂಬೇಡ್ಕರ್ ಮೊಮ್ಮಗ ವಂಚಿತ್ ಬಹುಜನ್ ಅಘಾಡಿ (ವಿಬಿಎ) ಮುಖ್ಯಸ್ಥ ಪ್ರಕಾಶ್ ಅಂಬೇಡ್ಕರ್ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಈ ಕುರಿತು ಬಹುಜನ್ ಅಘಾಡಿ ಟ್ವಿಟರ್ ನಲ್ಲಿ ಮಾಹಿತಿ ಹಂಚಿಕೊಂಡಿದ್ದು, ತೀವ್ರ ಎದೆನೋವು ಕಾಣಿಸಿಕೊಂಡ ಹಿನ್ನೆಲೆ ಅವರನ್ನು ಐಸಿಯುನಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ.ಅವರ ಹೃದಯದಲ್ಲಿ ರಕ್ತ ಹೆಪ್ಪುಗಟ್ಟಿದ್ದಕ್ಕಾಗಿ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಅವರ ಪ್ರಸ್ತುತ ಸ್ಥಿತಿ ಸ್ಥಿರವಾಗಿದೆ, ಮತ್ತು ಮುಂದಿನ ಗಂಟೆಯಲ್ಲಿ ಅವರು ಆಂಜಿಯೋಗ್ರಫಿಗೆ ಒಳಗಾಗಲಿದ್ದಾರೆ” ಎಂದು ತಿಳಿಸಿದೆ.