Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

Fact Check: ಏರ್ಟೆಲ್ ಸಿಮ್ ಇದ್ದರೆ ಗೃಹಲಕ್ಷ್ಮಿ ಹಣ ಬರಲ್ವ? ಇಲ್ಲಿದೆ ಅಸಲಿ ಸತ್ಯ

​ದೆಹಲಿಯಲ್ಲಿ ವಿದ್ಯಾರ್ಥಿಗಳ ಭಾರಿ ಆಕ್ರೋಶ: ‘ಗೋ ಪ್ರಧಾನ್ ಗೋ’ ಘೋಷಣೆ, ತಟ್ಟೆ-ಚಮಚ ಬಡಿಯುತ್ತಾ ಕೇಂದ್ರ ಸಚಿವರ ರಾಜೀನಾಮೆಗೆ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ!

ಸಾಗರದಲ್ಲಿ ವಿದ್ಯುತ್ ಕಂಪನಿಗಳ ಖಾಸಗೀಕರಣ ವಿರೋಧಿಸಿ ಬೃಹತ್ ಪ್ರತಿಭಟನೆ

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : `ಡಾ.ಮನಮೋಹನ್ ಸಿಂಗ್’ ನಿಧನ : ಇಂದು ನಡೆಯಬೇಕಿದ್ದ `ಜೈ ಬಾಪು, ಜೈ ಭೀಮ್, ಜೈ ಸಂವಿಧಾನ ಸಮಾವೇಶ’ ರದ್ದು.!
KARNATAKA

BREAKING : `ಡಾ.ಮನಮೋಹನ್ ಸಿಂಗ್’ ನಿಧನ : ಇಂದು ನಡೆಯಬೇಕಿದ್ದ `ಜೈ ಬಾಪು, ಜೈ ಭೀಮ್, ಜೈ ಸಂವಿಧಾನ ಸಮಾವೇಶ’ ರದ್ದು.!

By kannadanewsnow57

ಬೆಳಗಾವಿ : “ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ನಿಧನದ ಹಿನ್ನೆಲೆಯಲ್ಲಿ ಬೆಳಗಾವಿಯಲ್ಲಿ ಇಂದು ನಡೆಯಬೇಕಿದ್ದ ಜೈ ಬಾಪು, ಜೈ ಭೀಮ್, ಜೈ ಸಂವಿಧಾನ ಸಮಾವೇಶ ರದ್ದು ಮಾಡಲಾಗಿದೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಿಳಿಸಿದರು.

ಬೆಳಗಾವಿಯ ಸರ್ಕಿಟ್ ಹೌಸ್ ಅಲ್ಲಿ ಗುರುವಾರ ರಾತ್ರಿ ನಡೆದ ತುರ್ತು ಮಾಧ್ಯಮ ಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, “ಸಮಾವೇಶ ನಡೆಯಬೇಕಿದ್ದ ವೇದಿಕೆಯಲ್ಲಿಯೇ ಶುಕ್ರವಾರ ಬೆಳಿಗ್ಗೆ 10.30ಕ್ಕೆ ಮನಮೋಹನ್ ಸಿಂಗ್ ಅವರಿಗೆ ಶ್ರದ್ಧಾಂಜಲಿ ಸಭೆ ಏರ್ಪಡಿಸಲಾಗಿದೆ. ಮುಖ್ಯಮಂತ್ರಿಗಳು ಹಾಗೂ ಪಕ್ಷದ ವರಿಷ್ಟರ ಬಳಿ ಮಾತನಾಡಿ ಮುಂದಿನ ಕಾರ್ಯಕ್ರಮಗಳ ಬಗ್ಗೆ ಆದಷ್ಟು ಬೇಗ ತಿಳಿಸಲಾಗುವುದು” ಎಂದರು.

“ಶುಕ್ರವಾರ ಸರ್ಕಾರದ ಹಾಗೂ ಪಕ್ಷದ ಎಲ್ಲಾ ಕಾರ್ಯಕ್ರಮಗಳನ್ನು ರದ್ದು ಮಾಡಲಾಗಿದೆ. ಸರ್ಕಾರಿ ರಜೆ ಘೋಷಣೆ ಮಾಡಲಾಗಿದ್ದು, ರಾಜ್ಯದಲ್ಲಿ ಒಂದು ವಾರಗಳ ಕಾಲ ಶೋಕಾಚರಣೆ ಮಾಡಲಾಗುವುದು” ಎಂದು ಹೇಳಿದರು.

“ಶ್ರದ್ಧಾಂಜಲಿ ಕಾರ್ಯಕ್ರಮಕ್ಕೆ ಹೊರಜಿಲ್ಲೆಗಳಿಂದ ಜನರು ಆಗಮಿಸುವುದು ಬೇಡ. ಬದಲಾಗಿ ಬೆಳಗಾವಿಯಲ್ಲಿ ಇರುವವರು ಶ್ರದ್ಧಾಂಜಲಿ ಸಭೆಯಲ್ಲಿ ಭಾಗವಹಿಸಿ ಗೌರವ ಸಲ್ಲಿಸಬೇಕು. ಹೊರ ಊರುಗಳಿಂದ ಹೊರಡುವ ಅನೇಕ ಕಾರ್ಯಕರ್ತರು ಹಾಗೂ ನಾಯಕರುಗಳು ಬೆಳಗಾವಿಗೆ ಬರುವುದು ಬೇಡ. ಈಗಾಗಲೇ ಹೊರ ಊರುಗಳಿಂದ ಬಂದಿರುವವರು ಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ ಭಾಗವಹಿಸಬೇಕು” ಎಂದು ಮನವಿ ಮಾಡಿದರು.

“ಹೊರ ಊರುಗಳಿಂದ ಬಂದಿರುವ ಸಂಸದರು ಹಾಗೂ ನಾಯಕರುಗಳ ಹೊಣೆ ಹೊತ್ತಿರುವ ಉಸ್ತುವಾರಿ ಸಮಿತಿಯವರು ಅವರುಗಳು ತೆರಳುವ ತನಕ ಜವಾಬ್ದಾರಿಯನ್ನು ತೆಗೆದುಕೊಳ್ಳಬೇಕು. ನಿಮ್ಮ ಜವಾಬ್ದಾರಿ ಮರೆಯಬಾರದು” ಎಂದು ತಿಳಿಸಿದರು.

ಅಂತಿಮ ದರ್ಶನಕ್ಕಾಗಿ ದೆಹಲಿಗೆ ಪ್ರಯಾಣ

ನೀವು ಸಹ ದೆಹಲಿಗೆ ತೆರಳುವಿರಾ ಎಂದು ಕೇಳಿದಾಗ, “ನಾನು ಪಕ್ಷದ ಅಧ್ಯಕ್ಷನಾಗಿ ಮನಮೋಹನ್ ಸಿಂಗ್ ಅವರ ಅಂತಿಮ ದರ್ಶನದಲ್ಲಿ ಭಾಗವಹಿಸುವುದು ನಮ್ಮ ಕರ್ತವ್ಯ. ರಾಜ್ಯದ ಹಿರಿಯ ನಾಯಕರು ಸೇರಿದಂತೆ ಒಂದಷ್ಟು ಮಂದಿ ದೆಹಲಿಗೆ ತೆರಳಲಿದ್ದೇವೆ. ನಾವೆಲ್ಲರೂ ಅವರ ಮಾರ್ಗದರ್ಶನದಲ್ಲಿ ಹಾಗೂ ಕೈ ಕೆಳಗೆ ಕೆಲಸ ಮಾಡಿದವರು” ಎಂದು ಹೇಳಿದರು.

ಕರ್ನಾಟಕದ ಅಭಿವೃದ್ಧಿಗೆ ಸಾಕಷ್ಟು ಕೊಡುಗೆ ಕೊಟ್ಟವರು ಸಿಂಗ್

“ಮನಮೋಹನ್ ಸಿಂಗ್ ಅವರು ಕರ್ನಾಟಕಕ್ಕೆ ಅದರಲ್ಲೂ ಬೆಂಗಳೂರು ಅಭಿವೃದ್ಧಿಗೆ ಸಾಕಷ್ಟು ಕೊಡುಗೆ ನೀಡಿದವರು. ನರ್ಮ್ ಯೋಜನೆ ಮೂಲಕ ಅನೇಕ ನಗರಗಳ ಮೂಲ ಸೌಕರ್ಯ ಅಭಿವೃದ್ಧಿಗೆ ಸಾಕಷ್ಟು ಕೊಡುಗೆ ನೀಡಿದರು. ಬೆಂಗಳೂರಿನ ಅನೇಕ ಮೇಲ್ಸೇತುವೆಗಳು ಇವರು ನೀಡಿದ ಕೊಡುಗೆಗಳು. ಮನ ಮೋಹನ್ ಸಿಂಗ್ ಅವರ ಬಗ್ಗೆ ಮಾತನಾಡಲು ಒಂದು ದಿನವೂ ಸಾಲುವುದಿಲ್ಲ. ಅವರು ದೇಶದ ಎಲ್ಲಾ ವರ್ಗದ ಜನರಿಗೆ ಮರೆಯಲಾಗದ ಕೊಡುಗೆ ಕೊಟ್ಟಿದ್ದಾರೆ. ರೈತರ ಸಾಲಮನ್ನಾ ಮಾಡಿ ಅವರ ಪರವಾಗಿ ದೃಢವಾಗಿ ನಿಂತವರು” ಎಂದು ಸ್ಮರಿಸಿದರು.

“ಪ್ರತಿ ಕೆಲಸದಲ್ಲಿಯೂ ಗಾಂಭೀರ್ಯತೆ ಪ್ರಾಮಾಣಿಕತೆಯನ್ನು ಉಳಿಸಿಕೊಂಡಿದ್ದವರು ಮನಮೋಹನ್ ಸಿಂಗ್ ಅವರು. ಅವರ ಆಡಳಿತ ಕಾಲದಲ್ಲಿ ಬಡವರ ಪರವಾಗಿ ಅನೇಕ ಕಾರ್ಯಕ್ರಮಗಳನ್ನು ನೀಡಿದ್ದಾರೆ. ನರೇಗಾ ಮೂಲಕ ಗ್ರಾಮೀಣ ಜನರ ಬದುಕಿನಲ್ಲಿ ಉದ್ಯೋಗ ಗ್ಯಾರಂಟಿ ಸೃಷ್ಟಿ ಮಾಡಿದವರು. ಆಹಾರ ಭದ್ರತಾ ಕಾಯ್ದೆ, ಮಾಹಿತಿ ಹಕ್ಕು ಸೇರಿದಂತೆ ಈ ದೇಶವನ್ನು ಗಟ್ಟಿಗೊಳಿಸುವ ಅನೇಕ ಕಾಯ್ದೆಗಳನ್ನು ನೀಡಿದವರು” ಎಂದರು.

“‘ಗಾಂಧಿ ಭಾರತ’ ಕಾರ್ಯಕ್ರಮ ಅಂಗವಾಗಿ ಬೆಳಗಾವಿಯಲ್ಲಿ ಮಾಡಿರುವ ವಿದ್ಯುತ್ ದೀಪಾಲಂಕಾರವನ್ನು ಸಾರ್ವಜನಿಕರ ವೀಕ್ಷಣೆಗೆ ಉಳಿಸಿಕೊಳ್ಳುವ ಬಗ್ಗೆ ಮುಖ್ಯಮಂತ್ರಿಗಳ ಬಳಿ ಮಾತನಾಡಿ ಶುಕ್ರವಾರ ಬೆಳಿಗ್ಗೆ ಮಾಹಿತಿ ನೀಡಲಾಗುವುದು. ಸಾಕಷ್ಟು ಜನರು ದೀಪಾಲಂಕಾರವನ್ನು ವೀಕ್ಷಿಸುತ್ತಿದ್ದಾರೆ. ಈ ಕಾರಣಕ್ಕೆ ಉಳಿಸಿಕೊಳ್ಳುವ ಬಗ್ಗೆ ತೀರ್ಮಾನ ಮಾಡಲಾಗುವುದು” ಎಂದು ಹೇಳಿದರು.

BREAKING : `ಡಾ.ಮನಮೋಹನ್ ಸಿಂಗ್' ನಿಧನ : ಇಂದು ನಡೆಯಬೇಕಿದ್ದ `ಜೈ ಬಾಪು BREAKING: Dr. Manmohan Singh's death: 'Jai Bapu Jai Bheem Jai Constitution Conference' which was supposed to be held today has been cancelled ಜೈ ಭೀಮ್ ಜೈ ಸಂವಿಧಾನ ಸಮಾವೇಶ' ರದ್ದು.!
Share. Facebook Twitter LinkedIn WhatsApp Email

Related Posts

Fact Check: ಏರ್ಟೆಲ್ ಸಿಮ್ ಇದ್ದರೆ ಗೃಹಲಕ್ಷ್ಮಿ ಹಣ ಬರಲ್ವ? ಇಲ್ಲಿದೆ ಅಸಲಿ ಸತ್ಯ

2 Mins Read

ಸಾಗರದಲ್ಲಿ ವಿದ್ಯುತ್ ಕಂಪನಿಗಳ ಖಾಸಗೀಕರಣ ವಿರೋಧಿಸಿ ಬೃಹತ್ ಪ್ರತಿಭಟನೆ

2 Mins Read

UGCET-2026: ಕೆಇಎಯಿಂದ ಮೊದಲ ಸುತ್ತಿನ ಸೀಟು ಹಂಚಿಕೆ ವೇಳಾಪಟ್ಟಿ ಪ್ರಕಟ; ಇಂದಿನಿಂದಲೇ ಆಪ್ಷನ್ ಎಂಟ್ರಿ ಆರಂಭ

2 Mins Read
Recent News

Fact Check: ಏರ್ಟೆಲ್ ಸಿಮ್ ಇದ್ದರೆ ಗೃಹಲಕ್ಷ್ಮಿ ಹಣ ಬರಲ್ವ? ಇಲ್ಲಿದೆ ಅಸಲಿ ಸತ್ಯ

​ದೆಹಲಿಯಲ್ಲಿ ವಿದ್ಯಾರ್ಥಿಗಳ ಭಾರಿ ಆಕ್ರೋಶ: ‘ಗೋ ಪ್ರಧಾನ್ ಗೋ’ ಘೋಷಣೆ, ತಟ್ಟೆ-ಚಮಚ ಬಡಿಯುತ್ತಾ ಕೇಂದ್ರ ಸಚಿವರ ರಾಜೀನಾಮೆಗೆ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ!

ಸಾಗರದಲ್ಲಿ ವಿದ್ಯುತ್ ಕಂಪನಿಗಳ ಖಾಸಗೀಕರಣ ವಿರೋಧಿಸಿ ಬೃಹತ್ ಪ್ರತಿಭಟನೆ

​ಕೋಲ್ಕತ್ತಾ ವಿಮಾನ ನಿಲ್ದಾಣದಲ್ಲಿ ಹೈಡ್ರಾಮಾ: ಅಭಿಷೇಕ್ ಬ್ಯಾನರ್ಜಿ ಹತ್ಯೆಗೆ ಸಂಚು? ಬಂದೂಕುಧಾರಿ ಪತ್ತೆ !

State News
KARNATAKA

Fact Check: ಏರ್ಟೆಲ್ ಸಿಮ್ ಇದ್ದರೆ ಗೃಹಲಕ್ಷ್ಮಿ ಹಣ ಬರಲ್ವ? ಇಲ್ಲಿದೆ ಅಸಲಿ ಸತ್ಯ

By ವಸಂತ ಬಿ ಈಶ್ವರಗೆರೆ KARNATAKA 2 Mins Read

ಬೆಂಗಳೂರು: “ಏರ್ಟೆಲ್ ಸಿಮ್ ಬಳಸುವ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಿಗೆ ₹2,000 ಹಣ ನಿಲ್ಲಿಸಲಾಗುತ್ತದೆ” ಎಂಬ ಸಂದೇಶವೊಂದು ಇತ್ತೀಚೆಗೆ ಸಾಮಾಜಿಕ ಜಾಲತಾಣಗಳಲ್ಲಿ…

ಸಾಗರದಲ್ಲಿ ವಿದ್ಯುತ್ ಕಂಪನಿಗಳ ಖಾಸಗೀಕರಣ ವಿರೋಧಿಸಿ ಬೃಹತ್ ಪ್ರತಿಭಟನೆ

UGCET-2026: ಕೆಇಎಯಿಂದ ಮೊದಲ ಸುತ್ತಿನ ಸೀಟು ಹಂಚಿಕೆ ವೇಳಾಪಟ್ಟಿ ಪ್ರಕಟ; ಇಂದಿನಿಂದಲೇ ಆಪ್ಷನ್ ಎಂಟ್ರಿ ಆರಂಭ

ರಾಜ್ಯಾಧ್ಯಕ್ಷರ ವಾದ ಸರಿಲ್ಲ, ಜನ ಸಂಘಟನೆ ಪೂರಕವಾಗಿಲ್ಲ: ಬಿವೈವಿ ವಿರುದ್ಧ ಕುಮಾರ್ ಬಂಗಾರಪ್ಪ ಕಿಡಿ!

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.