ನವದೆಹಲಿ : ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರು ದೆಹಲಿ ಏಮ್ಸ್ ಆಸ್ಪತ್ರೆಯಲ್ಲಿ ನಿಧನರಾಗಿದ್ದು, ದೆಹಲಿಯ ಅವರ ನಿವಾಸದಲ್ಲಿ ಪಾರ್ಥಿವ ಶರೀರವನ್ನು ಅಂತಿಮ ದರ್ಶನಕ್ಕೆ ಇಡಲಾಗಿದೆ.
ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ನಿವಾಸಕ್ಕೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಅಗಮಿಸಿದ್ದು, ಮನಮೋಹನ್ ಸಿಂಗ್ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದುಕೊಂಡಿದ್ದಾರೆ. ಹೂಗುಚ್ಚ ಇಟ್ಟು ಪ್ರಧಾನಿ ಮೋದಿ ಹಾಗೂ ಅಮಿತ್ ಶಾ ಅವರು ಅಂತಿಮ ನಮನ ಸಲ್ಲಿಸಿದ್ದಾರೆ.
#WATCH | Delhi | PM Narendra Modi pays last respects to late former PM Dr Manmohan Singh and offers condolences to his family pic.twitter.com/7vn1PB1Xdj
— ANI (@ANI) December 27, 2024
#WATCH | Delhi | Union Home Amit Shah pays last respects to former PM Dr Manmohan Singh who passed away last night
(Source: DD) pic.twitter.com/kOh5iMO3oB
— ANI (@ANI) December 27, 2024
ಡಿಸೆಂಬರ್ 27 ರಂದು ನಡೆಯಬೇಕಿದ್ದ ಎಲ್ಲಾ ಸರ್ಕಾರಿ ಕಾರ್ಯಕ್ರಮಗಳನ್ನು ಕೇಂದ್ರ ಸರ್ಕಾರ ರದ್ದುಗೊಳಿಸಿದೆ. ಅಲ್ಲದೆ, ಮನಮೋಹನ್ ಸಿಂಗ್ ಅವರ ನಿಧನದ ಹಿನ್ನೆಲೆಯಲ್ಲಿ ಸರ್ಕಾರ 7 ದಿನಗಳ ರಾಷ್ಟ್ರೀಯ ಶೋಕಾಚರಣೆಯನ್ನು ಘೋಷಿಸಿದೆ. ಮತ್ತೊಂದೆಡೆ, ಕಾಂಗ್ರೆಸ್ ಕೂಡ ಇಂದು ತನ್ನ ಎಲ್ಲಾ ಕಾರ್ಯಕ್ರಮಗಳನ್ನು ರದ್ದುಗೊಳಿಸಿದೆ.