ನವದೆಹಲಿ : ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರು ದೆಹಲಿ ಏಮ್ಸ್ ಆಸ್ಪತ್ರೆಯಲ್ಲಿ ನಿಧನರಾಗಿದ್ದು, ದೆಹಲಿಯ ಅವರ ನಿವಾಸದಲ್ಲಿ ಪಾರ್ಥಿವ ಶರೀರವನ್ನು ಅಂತಿಮ ದರ್ಶನಕ್ಕೆ ಇಡಲಾಗಿದೆ.
ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ನಿವಾಸಕ್ಕೆ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಆಗಮಿಸಿದ್ದು, ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದುಕೊಂಡಿದ್ದಾರೆ.
#WATCH | Congress MPs Sonia Gandhi, Rahul Gandhi, Priyanka Gandhi Vadra and KC Venugopal and party's other leaders at the residence of late former PM Dr Manmohan Singh
(Video source: Congress) pic.twitter.com/CkucypVlII
— ANI (@ANI) December 27, 2024
#WATCH | Delhi: Congress Parliamentary Party Chairperson Sonia Gandhi arrives at the residence of former PM Dr Manmohan Singh pic.twitter.com/eqc5noBmTB
— ANI (@ANI) December 27, 2024
ಇದಕ್ಕೂ ಮುನ್ನ ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದುಕೊಂಡಿದ್ದು, ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದಾರೆ.
ಡಿಸೆಂಬರ್ 27 ರಂದು ನಡೆಯಬೇಕಿದ್ದ ಎಲ್ಲಾ ಸರ್ಕಾರಿ ಕಾರ್ಯಕ್ರಮಗಳನ್ನು ಕೇಂದ್ರ ಸರ್ಕಾರ ರದ್ದುಗೊಳಿಸಿದೆ. ಅಲ್ಲದೆ, ಮನಮೋಹನ್ ಸಿಂಗ್ ಅವರ ನಿಧನದ ಹಿನ್ನೆಲೆಯಲ್ಲಿ ಸರ್ಕಾರ 7 ದಿನಗಳ ರಾಷ್ಟ್ರೀಯ ಶೋಕಾಚರಣೆಯನ್ನು ಘೋಷಿಸಿದೆ. ಮತ್ತೊಂದೆಡೆ, ಕಾಂಗ್ರೆಸ್ ಕೂಡ ಇಂದು ತನ್ನ ಎಲ್ಲಾ ಕಾರ್ಯಕ್ರಮಗಳನ್ನು ರದ್ದುಗೊಳಿಸಿದೆ.