ಬೆಂಗಳೂರು : ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಕಿರುಕುಳ ತಡೆಗೆ ಸುಗ್ರೀವಾಜ್ಞೆ ಜಾರಿ ಸಂಬಂಧ ಸಿಎಂ ಸಿದ್ದರಾಮಯ್ಯಗೆ ಕಾನೂನು ಸಚಿವ ಹೆಚ್.ಕೆ.ಪಾಟೀಲ್ ಅವರು ಡ್ರಾಫ್ಟ್ ಕಳಿಸಿದ್ದಾರೆ.
ಮೈಕ್ರೋ ಫೈನಾನ್ಸ್ ಸಿಬ್ಬಂದಿಗಳು ಸಾಲಗಾರರಿಗೆ ಬಲವಂತದ ಕ್ರಮಗಳ ನಿಯಂತ್ರಣಕ್ಕೆ ಸುಗ್ರೀವಾಜ್ಞೆ ಹೊರಡಿಸುವ ಸಂಬಂಧ ಸಿಎಂ ಸಿದ್ದರಾಮಯ್ಯಗೆ ಕಾನೂನು ಸಚಿವ ಹೆಚ್.ಕೆ.ಪಾಟೀಲ್ ನಿನ್ನೆ ತಡರಾತ್ರಿ ಡ್ರಾಫ್ಟ್ ಸಿದ್ದಪಡಿಸಿ ಕಳಿಸಿದ್ದಾರೆ.
ಇಂದು ಸಿಎಂ ಸಿದ್ದರಾಮಯ್ಯ ಸುಗ್ರೀವಾಜ್ಞೆ ಕರಡು ಪರಿಶೀಲನೆ ನಡೆಸಲಿದ್ದಾರೆ. ಸುಗ್ರೀವಾಜ್ಞೆ ಜಾರಿಗೆ ಸಿಎಂ ಸಿದ್ದರಾಮಯ್ಯಗೆ ಸಚಿವ ಸಂಪುಟ ಪರಿಮಾಧಿಕಾರ ನೀಡಿದ್ದು, ಸಿಎಂ ಸಿದ್ದರಾಮಯ್ಯ ಪರಿಶೀಲನೆ ಬಳಿಕ ರಾಜ್ಯಪಾಲರಿಗೆ ಸುಗ್ರೀವಾಜ್ಞೆ ರವಾನಿಸಲಾಗುತ್ತದೆ. ಇಂದು ಅಥವಾ ನಾಳೆ ರಾಜ್ಯಪಾಲರ ಅಂಕಿತ ಸಿಗುವ ಸಾಧ್ಯತೆ ಇದೆ.