ಬೆಂಗಳೂರು : ಬೆಂಗಳೂರಿನಲ್ಲಿ DRI ಅಧಿಕಾರಿಗಳು ಮತ್ತೊಂದು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಕೆಂಪೇಗೌಡ ಏರ್ ಪೋರ್ಟ್ ನಲ್ಲಿ 3.2 ಕೆಜಿ ಕೊಕೇನ್ ಜಪ್ತಿ ಮಾಡಿಕೊಂಡಿದ್ದಾರೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಜೆನಿಫರ್ ಎಂಬ ಮಹಿಳೆ ಖತಾರ್ ನಿಂದ 3.2 ಕೆಜಿ ಕೊಕೇನ್ ಸಾಗಿಸುತ್ತಿದ್ದರು. ಕೆಂಪೇಗೌಡ ಏರ್ ಪೋರ್ಟ್ ನಲ್ಲಿ DRI ಅಧಿಕಾರಿಗಳು ತಪಾಸಣೆ ನಡೆಸಿ 2 ಕೆಜಿ ಕೊಕೇನ್ ಜಪ್ತಿ ಮಾಡಿಕೊಂಡಿದ್ದಾರೆ. ಸದ್ಯ ಮಹಿಳೆಯನ್ನು ವಶಕ್ಕೆ ಪಡೆದ ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ.