ನವದೆಹಲಿ : ಪಾಕಿಸ್ತಾನವು ಭಾರತದ ನಗರಗಳ ಡ್ರೋನ್ ದಾಳಿ ನಡೆಸಿದ್ದು, ಭಾರತೀಯ ಸೇನೆಯು ತಕ್ಕ ಪ್ರತ್ಯುತ್ತರ ನೀಡಿದೆ ಕೇಂದ್ರ ಗೃಹ ಸಚಿವಾಲಯದ ಅಧಿಕಾರಿಗಳು ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಗೃಹ ಸಚಿವಾಲಯದ ಅಧಿಕಾರಿಗಳ ಈ ಕುರಿತು ಮಾಹಿತಿ ನೀಡಿದ್ದು, ಭಾರತದ 12 ನಗರಗಳ ಮೇಲೆ ಪಾಕಿಸ್ತಾನ ದಾಳಿಗೆ ಯತ್ನಿಸಿದ್ದು, ಭಾರತೀಯ ಸೇನೆಯು ದಾಳಿಗೆ ಪ್ರತ್ಯುತ್ತರ ನೀಡಿದೆ. ಪಾಕ್ ನಡೆಸಿದ ದಾಳಿಯಲ್ಲಿ 16 ಅಮಾಯಕರು ಬಲಿಯಾಗಿದ್ದಾರೆ. ಪಾಕಿಸ್ತಾನ ನಮ್ಮ ದೇಶದ ಹಲವಡೆ ದಾಳಿಗೆ ಪ್ರಯತ್ನಿಸುತ್ತಿದ್ದಾರೆ ಎಂದರು.
ಅವಂತಿಪುರ, ಶ್ರೀನಗರ, ಜಮ್ಮು, ಪಠಾಣ್‌ಕೋಟ್, ಅಮೃತಸರ, ಕಪುರ್ತಲಾ, ಜಲಂಧರ್, ಲುಧಿಯಾನ, ಆದಂಪುರ, ಭಟಿಂಡಾ, ಚಂಡೀಗಢ, ನಲ್, ಫಲೋಡಿ, ಉತ್ತರಲೈ ಮತ್ತು ಭುಜ್ ಸೇರಿದಂತೆ ಉತ್ತರ ಮತ್ತು ಪಶ್ಚಿಮ ಭಾರತದ ಹಲವಾರು ಮಿಲಿಟರಿ ಗುರಿಗಳ ಮೇಲೆ ಡ್ರೋನ್‌ಗಳು ಮತ್ತು ಕ್ಷಿಪಣಿಗಳನ್ನು ಬಳಸಿ ದಾಳಿ ನಡೆಸಲಾಯಿತು. ಇವುಗಳನ್ನು ಇಂಟಿಗ್ರೇಟೆಡ್ ಕೌಂಟರ್ ಯುಎಎಸ್ ಗ್ರಿಡ್ ಮತ್ತು ವಾಯು ರಕ್ಷಣಾ ವ್ಯವಸ್ಥೆಗಳಿಂದ ತಟಸ್ಥಗೊಳಿಸಲಾಯಿತು. ಈ ದಾಳಿಯ ಅವಶೇಷಗಳನ್ನು ಈಗ ಪಾಕಿಸ್ತಾನದ ದಾಳಿಯನ್ನು ಸಾಬೀತುಪಡಿಸುವ ಹಲವಾರು ಸ್ಥಳಗಳಿಂದ ವಶಪಡಿಸಿಕೊಳ್ಳಲಾಗುತ್ತಿದೆ.
#WATCH | Delhi: Colonel Sofiya Qureshi says, "During the press briefing on operation Sindoor on 07 May 2025, India had called its response as focused, measured and non-escalatory. It was specifically mentioned that Pakistani military establishments had not been targeted. It was… pic.twitter.com/KIhL5Ao3DT
— ANI (@ANI) May 8, 2025