ತುಮಕೂರು : ಕೃಷಿ ಹೊಂಡದಲ್ಲಿ ಸೋಡಿಯಂ ಬ್ಲಾಸ್ಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಡ್ರೋನ್ ಪ್ರತಾಪ್ ನನ್ನು ಬಂಧಿಸಿದ್ದ ಪೊಲೀಸರು ಇದೀಗ ನಿನ್ನೆ ಡ್ರೋನ್ ಪ್ರತಾಪ್ ನ ಇಬ್ಬರು ಸ್ನೇಹಿತರನ್ನು ಬಂಧಿಸಿದ್ದಾರೆ. ಇದೀಗ ಡ್ರೋನ್ ಪ್ರತಾಪ್ ಸೇರಿದಂತೆ ಮೂವರ ಪೊಲೀಸ್ ಕಸ್ಟಡಿ ಇಂದು ಮುಕ್ತಾಯವಾಗಲಿದೆ. ಡ್ರೋನ್ ಪ್ರತಾಪ್, ಸ್ನೇಹಿತ ಪ್ರಜ್ವಲ್ ಹಾಗೂ ಕ್ಯಾಮರಾ ಮೆನ್ ವಿನಯ್ ಪೊಲೀಸ್ ಕಸ್ಟಡಿ ಇಂದು ಅಂತ್ಯವಾಗಲಿದೆ.
ಬೆಳಿಗ್ಗೆ 11:30 ಕ್ಕೆ ತುಮಕೂರು ಜಿಲ್ಲೆಯ ಮಧುಗಿರಿ ಕೋರ್ಟ್ ಗೆ ಮೂವರು ಹಾಜರಾಗಲಿದ್ದಾರೆ. ಕೋರ್ಟಿಗೆ ಮಿಡಿಗೇಶಿ ಪೊಲೀಸರು ಮೂವರನ್ನು ಹಾಜರುಪಡಿಸಲಿದ್ದಾರೆ. ಕೃಷಿಹೊಂಡದಲ್ಲಿ ಡೋಂಡ್ರೋನ್ ಟ್ ಪ್ರತಾಪ್ ಸೋಡಿಯಂ ಎಸೆದು ಸ್ಪೋಟಿಸಿದ್ದ. ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ಜನಕಲೊಟಿ ಬಳಿ ಈ ಒಂದು ಘಟನೆ ನಡೆದಿತ್ತು.ಈ ಸಂಬಂಧ ಬಿಡಿಗೇಶಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಡ್ರೋನ್ ಪ್ರತಾಪ್ ಬೆಂಗಳೂರಿನ ಅವೆನ್ಯೂ ರಸ್ತೆಯ ಅಂಗಡಿಯೊಂದರಲ್ಲಿ ಸೋಡಿಯಂ ಖರೀದಿಸಿದ್ದರು. ಈ ಹಿನ್ನೆಲೆಯಲ್ಲಿ ಸ್ಥಳ ಮಹಜರು ನಡೆಸಿದ ಪೊಲೀಸರು ಶನಿವಾರ ತಡರಾತ್ರಿ ಬೆಂಗಳೂರಿನಲ್ಲಿ ಇಬ್ಬರನ್ನು ಬಂಧಿಸಿದ್ದಾರೆ. ಇನ್ನೋರ್ವ ಆರೋಪಿ ಫಾರ್ಮ್ ಹೌಸ್ ಮಾಲೀಕ ಜಿತೇಂದ್ರ ಜೈನ್ ತಲೆಮರೆಸಿಕೊಂಡಿದ್ದು, ಆತನಿಗಾಗಿ ಹುಡುಕಾಟ ನಡೆಸಲಾಗುತ್ತಿದೆ.
ಈಗಾಗಲೇ ಡ್ರೋನ್ ಪ್ರತಾಪ್ ಗೆ ಮಧುಗಿರಿ ನ್ಯಾಯಾಲಯ ಮೂರು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದ್ದು, ಪೊಲೀಸರು ವಿಚಾರಣೆ ನಡೆಸಿದ್ದಾರೆ. ಹಾಗಾಗಿ ಇಂದು ಮೂವರ ಪೊಲೀಸ್ ಕಸ್ಟಡಿ ಅಂತ್ಯವಾಗಲಿದ್ದು ಹಿಂದೆ ನ್ಯಾಯಾಲಯದ ಮುಂದೆ ಪೊಲೀಸರು ಹಾಜರುಪಡಿಸಲಿದ್ದಾರೆ.