ಬೆಂಗಳೂರು : ಸಚಿವ ಅಹ್ಮದ್ ಖಾನ್ ಪುತ್ರ ಜೈದ್ ಖಾನ್ ನಟನೆಯ ಕಲ್ಟ್ ಚಿತ್ರದ ಡ್ರೋನ್ ಟೆಕ್ನಿಷಿಯನ್ ಸಂತೋಷ್ ಎಂಬುವರು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ.
ನವೆಂಬರ್ 25 ರಂದು ಚಿತ್ರದುರ್ಗದಲ್ಲಿ ಕಲ್ಟ್ ಸಿನಿಮಾ ಶೂಟಿಂಗ್ ಗೆ ಡ್ರೋನ್ ಟೆಕ್ನಿಷಿಯನ್ ಸಂತೋಷ್ ಗೆ ದಿನಕ್ಕೆ 25 ಸಾವಿರ ರೂ. ನಿಗದಿ ಮಾಡಿ ಶೂಟ್ ಮಾಡುತ್ತಿದ್ದರು. ಶೂಟಿಂಗ್ ವೇಳೆ ಡ್ರೋನ್ ತುಂಡಾಗಿದ್ದು, ನಷ್ಟ ಭರಿಸದ ಚಿತ್ರದ ನಾಯಕ ಜೈದ್ ಖಾನ್ ಹಾಗು ನಿರ್ದೇಶಕ ಮೇಲೆ ಆರೋಪ ಮಾಡಿ ಸಂತೋಷ್ ಆತ್ಮಹತ್ಯೆಗೆ ಯತ್ನಿಸಿದ್ದಾರೆ..
ಬೆಂಗಳೂರಿನ ಮಾಗಡಿ ರಸ್ತೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.