ಬೆಂಗಳೂರು : ಬೆಂಗಳೂರಲ್ಲಿ ಕಂದಾಯ ಗುಪ್ತಚರ ನಿರ್ದೇಶನಾಲಯ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ದೆಹಲಿಯಿಂದ ಬೆಂಗಳೂರಿಗೆ ರೈಲಿನಲ್ಲಿ ನಾಯಿಗೆ ನೀಡುವ ಆಹಾರದ ಬಾಕ್ಸ್ ಗಳಲ್ಲಿ ಮಾದಕ ವಸ್ತು ತರುತ್ತಿದ್ದ ಆರೋಪದ ಮೇರೆಗೆ ಮೂವರು ಆರೋಪಿಗಳನ್ನು ಬಂಧಿಸಿ ಸುಮಾರು 10 ಕೋಟಿ ರೂ.ಗೂ ಅಧಿಕ ಮೌಲ್ಯದ ಮಾದಕ ವಸ್ತುಗಳನ್ನು ಜಪ್ತಿ ಮಾಡಲಾಗಿದೆ.
ದೆಹಲಿಯಿಂದ ಬೆಂಗಳೂರಿಗೆ ಬರುತ್ತಿದ್ದ ರಾಜಧಾನಿ ಎಕ್ಸ್ ಪ್ರಸ್ ರೈಲಿನಲ್ಲಿ ನಾಯಿಗಳಿಗೆ ಹಾಕುವ ಆಹಾರದ ಬಾಕ್ಸ್ ಗಳಲ್ಲಿ ಕೆ.ಜಿ.ಗಟ್ಟಲೇ ಮಾದಕ ವಸ್ತು ತರಲಾಗುತ್ತಿದೆ ಎಂಬ ಮಾಹಿತಿ ಮೇರೆಗೆ ಡಿಆರ್ಐ ಅಧಿ ಕಾರಿ ಗಳು ದಾಳಿ ನಡೆಸಿ, ಆರೋಪಿಯನ್ನು ಮಾಲು ಸಮೇತ ಬಂಧಿಸಿದ್ದಾರೆ. ಈತನ ಮಾಹಿತಿ ಮೇರೆಗೆ ಬೆಂಗಳೂರಿನಲ್ಲಿ ಇತರೆ ಇಬ್ಬರು ಆರೋಪಿಗಳ ಬಂಧಿಸಲಾಗಿದೆ.
ಬಳಿಕ ಆರೋಪಿಗಳ ಮನೆಗಳ ಮೇಲೆ ದಾಳಿ ನಡೆಸಿ, 40 ಡೆಬಿಟ್ ಕಾರ್ಡ್ 70 ಕ್ಕೂ ಸಿಮ್ ಕಾರ್ಡ್ ಗಳನ್ನು ವಶಕ್ಕೆ ಪಡೆಯಲಾಗಿದೆ. ಪ್ರಾಥಮಿಕ ಮಾಹಿತಿ ಪ್ರಕಾರ ಆರೋಪಿಗಳಿಂದ ಸುಮಾರು 10 ಕೋಟಿ ರೂ.ಗೂ ಅಧಿಕ ಮೌಲ್ಯದ ಮಾದಕ ವಸ್ತುಗಳನ್ನು ಜಪ್ತಿ ಮಾಡಲಾಗಿದೆ ಎಂಬುದು ಗೊತ್ತಾಗಿದೆ. ಆದರೆ, ಆರೋಪಿಗಳ ಬಗ್ಗೆ ಡಿಆರ್ಐ ಅಧಿಕಾರಿಗಳು ಮಾಹಿತಿ ನೀಡಲು ನಿರಾಕರಿಸಿದ್ದಾರೆ. ತನಿಖೆ ನಡೆಯುತ್ತಿದೆ ಎಂದು ಮಾಹಿತಿ ನೀಡಿದರು.








