ನವದೆಹಲಿ : ಭಾರತೀಯ ಕರಾವಳಿ ಪಡೆಯು ದೇಶದ ಇತಿಹಾಸದಲ್ಲೇ ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಅಂಡಮಾನ್ ಮತ್ತು ನಿಕೋಬಾರ್ ದ್ವೀಪದಲ್ಲಿ ಮೀನುಗಾರರ ಬೋಟ್ ಮೂಲಕ ಅಕ್ರಮವಾಗಿ ಸಾಗಿಸುತ್ತಿದ್ದ ಸುಮಾರು 25 ಸಾವಿರ ಕೋಟಿ ಮೌಲ್ಯದ ಡ್ರಗ್ಸ್ ಅನ್ನು ಜಪ್ತಿ ಮಾಡಿಕೊಳ್ಳಲಾಗಿದೆ ಎಂದು ತಿಳಿದುಬಂದಿದೆ. ಈ ಒಂದು ಕಾರ್ಯಾಚರಣೆಯಲ್ಲಿ ಇಬ್ಬರು ಮಯನ್ಮಾರ್ ಪ್ರಜೆಗಳನ್ನು ಅರೆಸ್ಟ್ ಮಾಡಲಾಗಿದೆ.
ಹೌದು ಪೋರ್ಟ್ ಬ್ಲೇರ್ ನಿಂದ 150 ಕಿಲೋಮೀಟರ್ ದೂರದಲ್ಲಿ ಡ್ರಗ್ಸ್ ಸಾಗಾಟ ಮಾಡುತ್ತಿದ್ದರು. ಮೀನುಗಾರಿಕೆ ಬೋಟ್ನಲ್ಲಿ ಬಂಧಿತರು ಡ್ರಗ್ಸ್ ಸಾಗಿಸುತ್ತಿದ್ದರು. ಅನುಮಾನದ ಮೇಲೆ ಬೊಟ್ ಅನ್ನು ಪರಿಶೀಲನೆ ಮಾಡುವ ವೇಳೆ ಡ್ರಗ್ಸ್ ಪತ್ತೆಯಾಗಿದೆ. ಇತ್ತೀಚಿಗೆ ಬೃಹತ್ ಪ್ರಮಾಣದ ಡ್ರಗ್ಸ್ ಅನ್ನು ಕರಾವಳಿ ಪಡೆ ವಶಕ್ಕೆ ಪಡೆದುಕೊಂಡಿತ್ತು.ಭಾರತೀಯ ಕೋಸ್ಟ್ ಗಾರ್ಡ್ ಅಂಡಮಾನ್ ಜಲಪ್ರದೇಶದಲ್ಲಿ ಮೀನುಗಾರಿಕಾ ದೋಣಿಯಿಂದ ಸುಮಾರು 5500 ಕೆಜಿ ತೂಕದ ಮಾದಕವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.
ಇದರ ಬೆಲೆ 25000 ಕೋಟಿ ರೂ. ಆಗಿದೆ. ಈ ಸರಕು ಎಲ್ಲಿಂದ ಬರುತ್ತಿತ್ತು ಮತ್ತು ಯಾರಿಗೆ ಮತ್ತು ಎಲ್ಲಿಗೆ ಸರಬರಾಜು ಮಾಡಬೇಕಿತ್ತು ಎಂಬುದರ ಕುರಿತು ತನಿಖೆ ನಡೆಸಲಾಗುತ್ತಿದೆ. ವಶಪಡಿಸಿಕೊಂಡ ಡ್ರಗ್ಸ್ ಮೆಥಾಂಫೆಟಮೈನ್ ಎಂದು ನಂಬಲಾಗಿದೆ. ಜಂಟಿ ವಿಚಾರಣೆಗಾಗಿ ಅಂಡಮಾನ್ ನಿಕೋಬಾರ್ ಪೊಲೀಸರಿಗೆ ಮಾಹಿತಿ ನೀಡಲಾಗಿದೆ.ಎನ್‌ಸಿಬಿ, ನೌಕಾಪಡೆ ಮತ್ತು ಗುಜರಾತ್ ಪೊಲೀಸ್‌ನ ಭಯೋತ್ಪಾದನಾ ನಿಗ್ರಹ ದಳ ಜಂಟಿಯಾಗಿ ಕಾರ್ಯಾಚರಣೆ ನಡೆಸಿದೆ.