ಬೆಂಗಳೂರು : ತಲಕಾವೇರಿ ತೀರ್ಥೋದ್ಭವಕ್ಕೆ ಕ್ಷಣಗಣನೆ ಆರಂಭವಾಗಿದ್ದು, ಭಕ್ತ ಪ್ರವಾಹವೇ ಹರಿದು ಬರುತ್ತಿದೆ. ಸಾಂಪ್ರದಾಯಿಕ ಉಡುಪಿನಲ್ಲಿ ಮೂಲನಿವಾಸಿ ಮಹಿಳೆಯರು ಆಗಮಿಸುತ್ತಿದ್ದು, ಹಾಡು ನೃತ್ಯದ ಮೂಲಕ ಕಾವೇರಿ ಸ್ವಾಗತಕ್ಕೆ ಸಜ್ಜಾಗಿದ್ದಾರೆ. ಮಧ್ಯಾಹ್ನ 1 ಗಂಟೆ 44 ನಿಮಿಷಕ್ಕೆ ಸಲ್ಲುವ ಮಕರ ಲಗ್ನದಲ್ಲಿ ಕಾವೇರಿ ತೀರ್ಥರೂಪಿಣಿಯಾಗಿ ದರ್ಶನ ನೀಡಲಿದ್ದಾಳೆ.
ಇನ್ನು ಈ ಒಂದು ಕಾರ್ಯಕ್ರಮಕ್ಕೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸಹ ತೆರಳಲಿದ್ದರು. ಆದರೆ ಭಾಗಮಂಡಲದಲ್ಲಿ ಪ್ರತಿಕೂಲ ಹವಾಮಾನ ಹಿನ್ನೆಲೆಯಲ್ಲಿ ತಲಕಾವೇರಿ ಭೇಟಿ ರದ್ದು ಮಾಡಿದ್ದಾರೆ. ಭಾಗಮಂಡಲ ವ್ಯಾಪ್ತಿಯಲ್ಲಿ ಮಂಜು, ಮೋಡಕವಿದ ವಾತಾವರಣವಿದ್ದು ಪ್ರತಿಕೂಲ ಹವಾಮಾನ ಹಿನ್ನೆಲೆಯಲ್ಲಿ ತಲಕಾವೇರಿ ಭೇಟಿ ರದ್ದುಗೊಳಿಸಿದ್ದಾರೆ ಎಂದು ತಿಳಿದುಬಂದಿದೆ.
ಬಸ್ ವ್ಯವಸ್ಥೆ
ಶ್ರೀ ಭಗಂಡೇಶ್ವರ ಮತ್ತು ತಲಕಾವೇರಿ ದೇವಾಲಯಗಳಿಗೆ ವಿದ್ಯುತ್ ದೀಪಾಲಂಕಾರ ಮಾಡಲಾಗಿದ್ದು, ತೀರ್ಥೋದ್ಭವದ ವೀಕ್ಷಣೆಯ ವೇಳೆ ನೂಕು ನುಗ್ಗಲು ಉಂಟಾಗದಂತೆ ಎಲ್‌ಇಡಿ ಪರದೆಗಳ ವ್ಯವಸ್ಥೆ ಮಾಡಲಾಗಿದೆ. ಭಕ್ತರನ್ನು ಭಾಗಮಂಡಲದಿಂದ ತಲಕಾವೇರಿಗೆ ಕರೆದೊಯ್ಯಲು ಬಸ್ ಗಳ ವ್ಯವಸ್ಥೆಯೂ ಇದೆ.