ಚಿಕ್ಕಮಗಳೂರು : ಸದ್ಯ ಮಲೆನಾಡು ಭಾಗದಲ್ಲಿ ವರುಣ ಅಬ್ಬರಿಸುತ್ತಿದ್ದೂ, ಈಗಾಗಲೇ ಭಾರಿ ಮಳೆಯಿಂದಾಗಿ ಚಿಕ್ಕಮಂಗಳೂರು, ಶೃಂಗೇರಿ ಉಡುಪಿ, ಸೇರಿದಂತೆ ಹಲವು ಭಾಗಗಳಲ್ಲಿ ಮಳೆಯಿಂದಾಗಿ ಭಾರಿ ಆವಾಂತರ ಸೃಷ್ಟಿಯಾಗಿದ್ದು, ಇದೀಗ ಚಿಕ್ಕಮಂಗಳೂರಲ್ಲಿ ಮಳೆ ಅಬ್ಬರ ಮುಂದುವರೆದಿದ್ದ ಹಿನ್ನೆಲೆಯಲ್ಲಿ 6 ತಾಲೂಕಿನ ಅಂಗನವಾಡಿಗಳಿಗೆ ರಜೆ ಗೋಪಿಸಲಾಗಿದೆ.
ಚಿಕ್ಕಮಗಳೂರು ಜಿಲ್ಲೆಯಾದ್ಯಂತ ಭಾರಿ ಮಳೆ ಮುಂದುವರೆದ ಹಿನ್ನೆಲೆಯಲ್ಲಿ ಆರು ತಾಲೂಕುಗಳಲ್ಲಿ ಎಲ್ಲಾ ಅಂಗನವಾಡಿಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಚಿಕ್ಕಮಗಳೂರು, ಕಳಸ, ಮೂಡಿಗೆರೆ, ಶೃಂಗೇರಿ, ಕೊಪ್ಪ ಹಾಗು ಎನ್ ಆರ್ ಪುರ ತಾಲೂಕಿನಲ್ಲಿ ಅಂಗನವಾಡಿಗಳಿಗೆ ಇಂದು ರಜೆ ಘೋಷಿಸಲಾಗಿದೆ. ಚಿಕ್ಕಮಗಳೂರು ಜಿಲ್ಲಾಧಿಕಾರಿ ಮೀನಾ ನಾಗರಾಜ್ ರಜೆ ಘೋಷಣೆ ಮಾಡಿ ಆದೇಶ ಹೊರಡಿಸಿದ್ದಾರೆ.