ಉತ್ತರಕನ್ನಡ : ರಾಜ್ಯಾದ್ಯಂತ ಮುಂದಿನ ಕೆಲವು ದಿನಗಳ ಕಾಲ ಭಾರಿ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಈಗಾಗಲೇ ಮುನ್ಸೂಚನೆ ನೀಡಿದೆ. ಇನ್ನು ದಕ್ಷಿಣ ಕರ್ನಾಟಕದಲ್ಲಿ ಈಗಾಗಲೇ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ಆಗುತ್ತಿದ್ದು, ಉತ್ತರ ಕನ್ನಡ ಜಿಲ್ಲೆಯ ಕಾರವಾರದಲ್ಲಿ ಭಾರಿ ಮಳೆ ಹಿನ್ನೆಲೆಯಲ್ಲಿ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆ ಆಗುತ್ತಿರುವ ಹಿನ್ನೆಲೆಯಲ್ಲಿ ಕಾರವಾರ ತಾಲೂಕಿನ ಎಲ್ಲಾ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಎಲ್ಲಾ ಶಾಲೆಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಲಕ್ಷ್ಮಿ ಪ್ರಿಯ ಆದೇಶ ಹೊರಡಿಸಿದ್ದಾರೆ.








