ವಿಜಯನಗರ : ಐತಿಹಾಸಿಕ ಹಂಪಿ ಉತ್ಸವ ನಡೆಯುತ್ತಿದ್ದು, ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ ಹಂಪಿಯ ಜನತಾ ಪ್ಲಾಟ್ ನ್ ನ ಪ್ರದೇಶದಲ್ಲಿ ಇದೀಗ ಚಿರತೆ ಪ್ರತ್ಯಕ್ಷವಾಗಿದೆ.
ಜನನಿಬೀಡ ಪ್ರದೇಶದಲ್ಲಿ ಚಿರತೆ ಕಾಣಿಸಿಕೊಂಡಿದ್ದು ಇದೀಗ ಆತಂಕಕ್ಕೆ ಎಡೆ ಮಾಡಿಕೊಟ್ಟಿದೆ. ವಿರೂಪಾಕ್ಷ ದೇಗುಲದ ಕೂಗಳತೆ ದೂರದಲ್ಲಿ ಚಿರತೆ ಒಂದು ಪ್ರತ್ಯಕ್ಷವಾಗಿದೆ. ಚಿರತೆ ಓಡಾಟದ ದೃಶ್ಯ ಮನೆಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ನಿನ್ನೆ ಸಿಸಿ ಟಿವಿ ದೃಶ್ಯವನ್ನು ನೋಡಿ ಸಾರ್ವಜನಿಕರು ಬೆಚ್ಚಿಬಿದ್ದಿದ್ದಾರೆ.








