ತುಮಕೂರು: ರಾಸಲೀಲೆ ವೀಡಿಯೋ ವೈರಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಮಧುಗಿರಿ ಡಿವೈಎಸ್ ಪಿ ರಾಮಚಂದ್ರಪ್ಪರನ್ನು ಪೊಲೀಸರು ಬಂಧಿಸಿದ್ದಾರೆ.
ಜಮೀನು ವ್ಯಾಜ್ಯಕ್ಕೆ ಸಂಬಂಧಪಟ್ಟಂತೆ ಮಹಿಳೆ ಒಬ್ಬಳು ದೂರು ನೀಡಲು ಠಾಣೆಯ ಮೆಟ್ಟಿಲು ಏರಿದ್ದಾಳೆ. ಆದರೆ ಠಾಣೆಯಲ್ಲಿದ ಡಿವೈಎಸ್ಪಿ ಅಧಿಕಾರಿ ಒಬ್ಬ ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಘಟನೆ ಗೃಹ ಸಚಿವ ಡಾ.ಜಿ ಪರಮೇಶ್ವರ್ ಕ್ಷೇತ್ರ ತುಮಕೂರು ಜಿಲ್ಲೆಯ ಮಧುಗಿರಿಯಲ್ಲಿ ನಡೆದಿತ್ತು. ಅಲ್ಲದೇ ಡಿವೈಎಸ್ಪಿ ರಾಸಲೀಲೆ ವೀಡಿಯೋ ವೈರಲ್ ಆಗಿತ್ತು. ಈ ಹಿನ್ನಲೆಯಲ್ಲಿ ತುಮಕೂರಿನ ಮಧುಗಿರಿ ಡಿವೈಎಸ್ ಪಿ ರಾಮಚಂದ್ರಪ್ಪನನ್ನು ಬಂಧಿಸಲಾಗಿದೆ.
ಪಾವಗಡದ ಮಹಿಳೆಯೊಬ್ಬರು ಜಮೀನು ವ್ಯಾಜ್ಯದ ಬಗ್ಗೆ ದೂರು ನೀಡಲು ಮಹಿಳೆ ಪಾವಗಡದಿಂದ ಡಿವೈಎಸ್ಪಿ ಕಚೇರಿಗೆ ಬಂದಿದ್ದರು. ಮಹಿಳೆಯನ್ನು ಏಕಾಂತ ಕೊಠಡಿಗೆ ಕರೆದುಕೊಂಡು ಹೋದ ಡಿವೈಎಸ್ಪಿ ರಾಮಚಂದ್ರಪ್ಪ ಲೈಂಗಿಕ ಕಿರುಕುಳ ನೀಡಿದ್ದಾರೆ. ಲೈಂಗಿಕ ದೌರ್ಜನ್ಯ ಎಸಗಿರುವ ವಿಡಿಯೋ ಸದ್ಯ ಎಲ್ಲೆಡೆ ವೈರಲ್ ಆಗಿತ್ತು. ಈ ವಿಡಿಯೊ ವೈರಲ್ ಆಗುತ್ತಿದ್ದಂತೆ ರಾಮಚಂದ್ರಪ್ಪನನ್ನು ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವಂತ ಡಿಜಿ ಮತ್ತು ಐಜಿಪಿಯವರು ತುಮಕೂರಿನ ಮಧುಗಿರಿಯ ಡಿವೈಎಸ್ಪಿ ರಾಮಚಂದ್ರಪ್ಪ ಅವರನ್ನು ಅಮಾನತುಗೊಳಿಸಿ ಆದೇಶಿಸಿದ್ದಾರೆ.