ಉತ್ತರಪ್ರದೇಶ : ಕಳೆದ ಕೆಲವು ದಿನಗಳ ಹಿಂದೆ ಉತ್ತರ ಪ್ರದೇಶದ ಅಯೋಧ್ಯೆಯ ಶ್ರೀ ರಾಮ ಮಂದಿರ ಸ್ಫೋಟಿಸುವುದಾಗಿ ಬೆದರಿಕೆ ಇಮೇಲ್ ಸಂದೇಶ ಬಂದಿತ್ತು. ಇದೀಗ ಮತ್ತೊಂದು ಬೆದರಿಕೆ ಇ-ಮೇಲ್ ಸಂದೇಶ ಬಂದಿದ್ದು ಇಮೇಲ್ ನಲ್ಲಿ ಶ್ರೀರಾಮ ಮಂದಿರವನ್ನು ಬಾಂಬ್ ಇಟ್ಟು ಸ್ಪೋಟಿಸುವುದಾಗಿ ಬೆದರಿಕೆ ಇಮೇಲ್ ಸಂದೇಶ ಬಂದಿದೆ.
ಹೌದು ರಾಮ ಜನ್ಮಭೂಮಿ ಟ್ರಸ್ಟಿಗೆ ಬಂದಿರುವ ಬೆದರಿಕೆ ಇ-ಮೇಲ್ ಅನ್ನು ಅಧಿಕಾರಿಗಳು ಇದೀಗ ಪರಿಶೀಲನೆ ಮಾಡುತ್ತಿದ್ದಾರೆ. ತಮಿಳುನಾಡು ಮೂಲದಿಂದ ಇ-ಮೇಲ್ ಸಂದೇಶ ಬಂದಿರುವ ಬಗ್ಗೆ ಮಾಹಿತಿ ತಿಳಿದು ಬಂದಿದೆ. ಈ ಕುರಿತು ಇನ್ನಷ್ಟು ಮಾಹಿತಿಯನ್ನು ನಿರೀಕ್ಷಿಸಲಾಗುತ್ತಿದೆ.