ಬೆಂಗಳೂರು : ರಾಜ್ಯದಲ್ಲಿ ಮಳೆಯ ಆರ್ಭಟ ಶುರುವಾಗಿದ್ದು, ಬೆಂಗಳೂರಿನಲ್ಲಿ ಬೆಳಗ್ಗೆಯಿಂದ ಗುಡುಗು, ಮಿಂಚು ಸಹಿತ ಭಾರೀ ಮಳೆಯಾಗುತ್ತಿದ್ದು, ಹಲವಡೆ ವಾಹನ ಸವಾರರು ಪರದಾಟ ನಡೆಸಿದ್ದಾರೆ.
ಬೆಂಗಳೂರಿನ ಹೆಬ್ಬಗೋಡಿ, ಚಂದಾಪುರ, ಎಲೆಕ್ಟ್ರಾನಿಕ್ ಸಿಟಿ, ಬನ್ನೇರುಘಟ ಸೇರಿದಂತೆ ಹಲವಡೆ ಭಾರೀ ಮಳೆಯಾಗುತ್ತಿದ್ದು, ಮನೆಯಿಂದ ಕೆಲಸಕ್ಕೆ ಹೋಗುವ ವಾಹನ ಸವಾರರು ಪರದಾಡುವಂತಾಗಿದೆ.
ನಗರದ ಹಲವೆಡೆ ಗುಡುಗು, ಮಿಂಚು ಸಹಿತ ಮಳೆ ಆಗುತ್ತಿದೆ. ಬೆಂಗಳುರಿನ ಮಾದನಾಯಕನಹಳ್ಳಿ, ಮಾಕಳಿ, ಮಾಚೋಹಳ್ಳಿ, ಟೌನ್ ಹಾಲ್, ಮೆಜೆಸ್ಟಿಕ್, ಕಾರ್ಪೋರೇಷನ್ ಸರ್ಕಲ್, ಶಾಂತಿನಗರ, ಕೆ.ಆರ್. ಮಾರ್ಕೆಟ್, ಲಾಲ್ ಬಾಗ್, ಚಾಲುಕ್ಯ ಸರ್ಕಲ್, ವಿಧಾನಸೌಧ ಸುತ್ತಮುತ್ತ ಭಾರೀ ಮಳೆಯಾಗುತ್ತಿದ್ದು, ವಾಹನ ಸವಾರರು ಪರದಾಡಿದ್ದಾರೆ.