ಕಲಬುರ್ಗಿ : ನಾಡಿನಾದ್ಯಂತ ಇಂದು ಎಲ್ಲರು ದೀಪಾವಳಿ ಹಬ್ಬದ ಸಂಭ್ರಮದಲ್ಲಿ ಇದ್ದರೆ, ಕಲ್ಬುರ್ಗಿಯಲ್ಲಿ ಭೂಮಿ ಕಂಪಿಸಿದ ಅನುಭವ ಆಗಿದ್ದು, ಜಿಲ್ಲೆಯ ಚಿಂಚೋಳಿ ತಾಲೂಕಿನ ಶಿರೋಳಿ ಗ್ರಾಮದಲ್ಲಿ ಭೂಮಿ ಕಂಪಿಸಿದೆ. ಬೆಳಗ್ಗೆ 8:00 ಸುಮಾರಿಗೆ ಈ ಒಂದು ಭೂಮಿ ಕಂಪಿಸಿದ ಅನುಭವ ಆಗಿದೆ
ಈ ವೇಳೆ ತಕ್ಷಣ ಜನರು ಭಯದಿಂದ ಮನೆಯಿಂದ ಹೊರಗಡೆ ಹೊಡಿ ಬಂದಿದ್ದಾರೆ. ಅಲ್ಲದೆ ಆತಂಕದಿಂದ ಗ್ರಾಮಸ್ಥರು ಬಯಲು ಪ್ರದೇಶದಲ್ಲಿ ಕೆಲವು ಹೊತ್ತು ಕಾಲ ಕಳೆದಿದ್ದಾರೆ ಎಂದು ತಿಳಿದುಬಂದಿದೆ. ಘಟನೆಯಲ್ಲಿ ಯಾವುದೇ ಅನಾಹುತ ಆಗಿರುವ ಕುರಿತು ಮಾಹಿತಿ ತಿಳಿದುಬಂದಿಲ್ಲ. ಘಟನೆಗೆ ಸಂಬಂಧಿಸಿದಂತೆ ಮತ್ತಷ್ಟು ಮಾಹಿತಿಯನ್ನು ನಿರೀಕ್ಷಿಸಲಾಗುತ್ತಿದೆ.