ವಿಜಯಪುರ : ವಿಜಯಪುರದಲ್ಲಿ ಮತ್ತೆ ಭೂಮಿ ಕಂಪಿಸಿದ ಅನುಭವವಾಗಿದ್ದು, ಜನರು ಬೆಚ್ಚಿ ಬಿದ್ದು ಮನೆಯಿಂದ ಹೊರಗೆ ಓಡಿ ಬಂದಿರುವ ಘಟನೆ ನಡೆದಿದೆ.
ವಿಜಯಪುರದಲ್ಲಿ ಇಂದು ಬೆಳಗ್ಗೆ 11.43ರ ಸುಮಾರಿಗೆ ಜೋರಾದ ಶಬ್ದದೊಂದಿಗೆ ಭೂಮಿ ನಡುಗಿದ ಅನುಭವವಾಗಿದೆ.
ಕೆಲ ತಿಂಗಳುಗಳ ಹಿಂದೆ ವಿಜಯಪುರ ಜಿಲ್ಲೆಯ ಸಿಂದಗಿ ಪಟ್ಟಣದಲ್ಲಿ ಭೂಮಿ ಕಂಪಿಸಿದ ಅನುಭವ ಆಗಿತ್ತು. ಒಂದೇ ದಿನದಲ್ಲಿ ಸಿಂದಗಿ ಪಟ್ಟಣದ ಸುತ್ತಮುತ್ತ 4 ಬಾರಿ ಭೂಮಿ ಕಂಪಿಸಿದ ಅನುಭವ ಆಗಿತ್ತು. ಇದೀಗ ವಿಜಯಪುರ ಜಿಲ್ಲೆಯ ಭೂಮಿ ಕಂಪಿಸಿದ ಅನುಭವವಾಗಿದ್ದು, ಜನರಲ್ಲಿ ಆತಂಕ ಮೂಡಿದ್ದು, ಮನೆ ಬಿಟ್ಟು ಅನೇಕರು ಹೊರಬಂದಿದ್ದಾರೆ.








