ಕಲಬುರಗಿ : ಕಲಬುರಗಿ ಜಿಲ್ಲೆಯಲ್ಲಿ ಭೂಮಿ ಕಂಪಿಸಿದ ಅನುಭವವಾಗಿದ್ದು, ಇಂದು ಬೆಳಗ್ಗಿನ ಜಾವ ಭೂಮಿ ಕಂಪಿಸಿದ ಅನುಭವವಾಗಿದ್ದು, ಜನರು ಕೂಡಲೇ ಭಯದಿಂದ ಮನೆಯಿಂದ ಹೊರಗಡೆ ಓಡಿಬಂದಿದ್ದಾರೆ.
ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ಶಿರೋಳ್ಳಿ ಗ್ರಾಮದಲ್ಲಿ ಭೂಮಿ ಕಂಪಿಸಿದೆ. ಇದು ಗ್ರಾಮದ ಜನತೆಯಲ್ಲಿ ಆತಂಕ ಮೂಡಿಸಿದೆ. ನಿರಂತರ ಉಂಟಾಗುವ ಭೂಕಂಪನದಿಂದ ಜೀವ ಭೀತಿ ಎದುರಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.