ನವದೆಹಲಿ: ಉತ್ತರ ಪೆಸಿಫಿಕ್ ಮಹಾಸಾಗರದಲ್ಲಿರುವ ಕಮ್ಚಟ್ಕಾ ಪರ್ಯಾಯ ದ್ವೀಪದ ಬಳಿ ಇರುವ ರಷ್ಯಾದ ಕುರಿಲ್ ದ್ವೀಪಗಳಲ್ಲಿ ಶನಿವಾರ 6.1 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ (ಎನ್ಸಿಎಸ್) ವರದಿ ಮಾಡಿದೆ.
ಭಾರತೀಯ ಕಾಲಮಾನ 19:33:54 ಕ್ಕೆ 10 ಕಿ.ಮೀ ಆಳದಲ್ಲಿ ಭೂಕಂಪ ಸಂಭವಿಸಿದ್ದು, ಅದರ ಕೇಂದ್ರಬಿಂದು 49.94 ಡಿಗ್ರಿ ಉತ್ತರ ಅಕ್ಷಾಂಶ ಮತ್ತು 162.70 ಡಿಗ್ರಿ ಪೂರ್ವ ರೇಖಾಂಶದಲ್ಲಿದೆ