ಬೆಂಗಳೂರು : ಹಾಸನ ಜಿಲ್ಲೆಯಲ್ಲಿ ಹೃದಯಾಘಾತದಿಂದ ಸರಣಿ ಸಾವು ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಬೆಂಗಳೂರಿನ ಜಯದೇವ ಹೃದ್ರೋಗ ಆಸ್ಪತ್ರೆಯಲ್ಲಿ ತನಿಖಾ ತಂಡದಿಂದ ವರದಿ ಸ್ವೀಕರಿಸಿದರು. ಹೃದಯಘಾತದಿಂದ ಸರಣಿ ಸಾವಿನ ಬಗ್ಗೆ ತನಿಖಾ ವರದಿ ಸಲ್ಲಿಕೆಯಾಗಿದೆ. ಮೇ ಮತ್ತು ಜೂನ್ ತಿಂಗಳಲ್ಲಿ ಮೃತಪಟ್ಟ ನಾಲ್ವರು ಕಾರ್ಡಿಯಾಕ್ ಅರೆಸ್ಟ್ ನಿಂದ ಮೃತಪಟ್ಟಿಲ್ಲವೆಂಬುದು ದೃಢವಾಗಿದೆ ಎಂದರು.
ಹೃದಯಾಘಾತಕ್ಕೂ ಕೋವಿಡ್ ಸಂಬಂಧ ಇಲ್ಲವೆಂದು ಹೇಳಲಾಗಿದೆ. ಮಾಹಿತಿಯ ಆಧಾರದ ಮೇಲೆ ಮಕ್ಕಳಿಗೆ ಸ್ಕ್ರೀನಿಂಗ್ ಶುರು ಮಾಡಲಿದ್ದೇವೆ. ಸಮುದಾಯ ಆರೋಗ್ಯ ಕೇಂದ್ರದಲ್ಲಿ ಇಸಿಜಿ ಅಳವಡಿಸಲು ತಜ್ಞರು ಸಲಹೆ ನೀಡಿದ್ದಾರೆ. ಹೃದಯ ಜ್ಯೋತಿ ಯೋಜನೆ ವಿಸ್ತರಣೆ ಮಾಡಬೇಕೆಂಬ ಆಲೋಚನೆ ಇದೆ. ಸಿಪಿಆರ್ ತರಬೇತಿ ನೀಡುವಂತೆ ಹೃದ್ರೋಗ ತಜ್ಞರು ಸಲಹೆ ನೀಡಿದ್ದಾರೆ. ಆಟೋ ಕ್ಯಾಬ್ ಚಾಲಕರಿಗೆ ಪ್ರತ್ಯೇಕ ಹೃದಯ ತಪಾಸಣೆಗೆ ಸಲಹೆ ನೀಡಿದ್ದಾರೆ. ಸ್ಕ್ರೀನಿಂಗ್ ಮಾಡಿಸಲು ಚಾಲಕರ ಸಂಘದ ಜೊತೆಗೆ ಮಾತುಕತೆ ಮಾಡುತ್ತೇವೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಹೇಳಿಕೆ ನೀಡಿದರು.
ಚಾಲಕರೇ ಹೆಚ್ಚು ಹೃದಯಾಘಾತಕ್ಕೆ ಒಳಗಾಗಿರುವುದು ಕಂಡು ಬಂದಿದೆ. ಆಟೋ, ಕ್ಯಾಬ್ ಚಾಲಕರ ಬಗ್ಗೆ ಹೆಚ್ಚು ಗಮನ ಹರಿಸುತ್ತೇವೆ. ಆಟೋ ಕ್ಯಾಬ್ ಚಾಲಕರಿಗೆ ಪ್ರತ್ಯೇಕ ತಪಾಸಣೆ ಮಾಡಿಸಲು ಸಲಹೆ ನೀಡಲಾಗಿದ್ದು, ಬಹುತೇಕರಲ್ಲಿ ಧೂಮಪಾನ ಮತ್ತು ಮಧ್ಯಪಾನ ಅಭ್ಯಾಸ ಇತ್ತು. ಏಳು ಜನ ಹಾಸನದವರು ಅದರಲ್ಲಿ ಬೆಂಗಳೂರಿನಲ್ಲಿ ನಾಲ್ವರು ಸಾವನಪ್ಪಿದ್ದಾರೆ. ಹೀಗಾಗಿ ಇದು ಹಾಸನದ ಸಾವು ಅಂತ ಹೇಳಲು ಸಾಧ್ಯವಿಲ್ಲ. ಸಮುದಾಯ ಪ್ರಾಥಮಿಕ ಕೇಂದ್ರದಲ್ಲಿ ಇಸಿಜಿ ವ್ಯವಸ್ಥೆ ಮಾಡುತ್ತೇವೆ. ಎಂದು ತಿಳಿಸಿದರು.