ಧಾರವಾಡ : ಧಾರವಾಡ ಕೆಐಎಡಿಬಿಯಲ್ಲಿ ನಕಲಿ ರೈತರ ಖಾತೆಗಳನ್ನು ಸೃಷ್ಟಿಸಿ, 30 ಕೋಟಿ ಅಕ್ರಮ ಹಣ ವರ್ಗಾವಣೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಇಬ್ಬರನ್ನು ಇಡಿ ಅಧಿಕಾರಿಗಳು ವಶಕ್ಕೆ ಪಡೆದಿದ್ದು, ಇಬ್ಬರನ್ನು ವಾಹನದಲ್ಲಿ ಬೆಂಗಳೂರಿಗೆ ಕರೆದೊಯ್ದಿದ್ದಾರೆ.
ಹೌದು ಕೆಐಎಡಿಬಿ ಡಬಲ್ ಪೇಮೆಂಟ್ ಹಗರಣಕ್ಕೆ ಸಂಬಂಧಿಸಿದಂತೆ ನಿವೃತ್ತ ವಿಶೇಷ ಭೂಸ್ವಾಧೀನಾಧಿಕಾರಿ ವಿ.ಡಿ. ಸಜ್ಜನ್ ಹಾಗೂ ಕೆಐಎಡಿಬಿಯಲ್ಲಿ ಏಜೆಂಟ್ ಆಗಿ ಕೆಲಸ ಮಾಡ್ತಿದ್ದ ಅಶ್ಫಾಕ್ ದುಂಡಸಿ ಇಬ್ಬರನ್ನು ಇಡಿ ವಶಕ್ಕೆ ಪಡೆದಿದ್ದು, ಇಬ್ಬರನ್ನು ವಾಹನದಲ್ಲಿ ಬೆಂಗಳೂರಿಗೆ ಕರೆದೊಯ್ದಿದ್ದಾರೆ.
ಇನ್ನು ಈ ಪ್ರಕರಣದಲ್ಲಿ ಜಾಮೀನು ಸಿಗದ ಹಿನ್ನೆಲೆ ಈ ಇಬ್ಬರು ಧಾರವಾಡ ಜಿಲ್ಲಾ ಕಾರಾಗೃಹದಲ್ಲಿದ್ದರು. ಇತ್ತೀಚೆಗೆ ಕೆಐಎಡಿಬಿ ಕಚೇರಿ ಮೇಲೆ ದಾಳಿ ಮಾಡಿದ್ದ ಇಡಿ ತಂಡ, ಅನೇಕ ದಾಖಲೆ ಪತ್ರ ವಶಕ್ಕೆ ಪಡೆದು ಪರಿಶೀಲನೆ ನಡೆಸಿತ್ತು. ಅದರಂತೆ ಪ್ರಕರಣದ ಹೆಚ್ಚಿನ ವಿಚಾರಣೆಗಾಗಿ ಇಬ್ಬರನ್ನೂ ಕರೆದೊಯ್ಯಲಾಗಿದೆ.