ಮೈಸೂರು : ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ ಇಂದು ಮೈಸೂರಿನಲ್ಲಿರುವ ಮುಡಾ ಕಚೇರಿಯ ಮೇಲೆ ಇಡಿ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಸುಮಾರು 20ಕ್ಕೂ ಹೆಚ್ಚು ಅಧಿಕಾರಿಗಳು ದಾಳಿ ಮಾಡಿದ್ದು ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ.
ಇದೆ ವೇಳೆ ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ಸಿದ್ದರಾಮಯ್ಯ ಅವರ ಮೂಲ ದಾಖಲೆಗಳನ್ನು ಕೊಡಿ. ನಮಗೆ ನಕಲಿ ಪ್ರತಿಗಳು ಬೇಡ ಎಂದು ಇಡಿ ಅಧಿಕಾರಿಗಳು ಮುಡಾ ಕಾರ್ಯದರ್ಶಿ ಪ್ರಸನ್ನ ಕುಮಾರ್ ಅವರಿಗೆ ಸೂಚನೆ ನೀಡಿದ್ದಾರೆ.
ಈ ಹಿನ್ನೆಲೆಯಲ್ಲಿ ಈ ಒಂದು ಪ್ರಕಾರಣ ಗಂಭೀರವಾದಂತಹ ಸ್ವರೂಪವನ್ನು ಪಡೆದುಕೊಂಡಿದೆ ಎನ್ನಲಾಗುತ್ತಿದೆ. ನಮಗೆ ನಕಲು ಪ್ರತಿ ಬೇಡ ನಮಗೆ ಮೂಲ ದಾಖಲೆಗಳನ್ನು ತಕ್ಷಣ ಕೊಡಿ ಎಂದು ಅಧಿಕಾರಿಗಳು ಮುಡಾd ಕಾರ್ಯದರ್ಶಿಗೆ ತಿಳಿಸಿದ್ದಾರೆ.