ಮಂಡ್ಯ : ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ ಈಗಾಗಲೇ ಜಾರಿ ನಿರ್ದೇಶನಲಯದ ಅಧಿಕಾರಿಗಳು ಹಾಗೂ ಲೋಕಾಯುಕ್ತ ಅಧಿಕಾರಿಗಳು ತನಿಖೆ ಕೈಗೊಂಡಿದ್ದಾರೆ. ಇದರ ಮಧ್ಯ ಈ ಒಂದು ವಿಚಾರಣೆಗೆ ಸಂಬಂಧಪಟ್ಟಂತೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದು, ಮುಡಾ ಹಗರಣದಲ್ಲಿ ED ಗೆ ತನಿಖೆ ಮಾಡಲು ಅಧಿಕಾರವೇ ಇಲ್ಲ ಎಂದು ತಿಳಿಸಿದರು.
ಮಂಡ್ಯ ಜಿಲ್ಲೆಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮುಡಾ ಪ್ರಕರಣದಲ್ಲಿ ಇಡಿ ತನಿಖೆ ಮಾಡಲು ಬರುವುದಿಲ್ಲ. ರಾಜಕೀಯ ದುರುದ್ದೇಶದಿಂದ ಇಡಿ ತನಿಖೆ ಮಾಡುತ್ತಿದೆ. ಇಡಿಗೆ ತನಿಖೆ ಮಾಡುವ ಅಧಿಕಾರವೇ ಇಲ್ಲ. ಪ್ರಕರಣದ ತನಿಖೆ ನಡೆಸುವಂತೆ ಈಗಾಗಲೇ ಕೋರ್ಟ್ ಸೂಚಿಸಿದೆ. ಲೋಕಾಯುಕ್ತಕ್ಕೆ ಕೋರ್ಟ್ ಸೂಚನೆ ನೀಡಿದೆ.ಆದರೆ ಇಡಿ ಅವರು ಮಧ್ಯಪ್ರವೇಶ ಮಾಡುವ ಅಗತ್ಯ ಏನಿತ್ತು? ಇಡಿಯವರ ತನಿಖೆ ದುರುದ್ದೇಶಪೂರಿತ ಅನ್ನುವುದು ಅರ್ಥವಾಗುತ್ತದೆ ಎಂದರು.
ಇದೀಗ ಮುಡಾ ಹಗರಣಕ್ಕೆ ಮತ್ತೊಂದು ಸಿಕ್ಕಿದ್ದು ಸುಮಾರು 700 ಕೋಟಿಗೂ ಅಧಿಕ ಹಗರಣ ನಡೆದಿದೆ ಎಂದು ಇಡೀ ಅಧಿಕಾರಿಗಳು ತಿಳಿಸಿದ್ದಾರೆ. ಮುಡಾದ 1095 ಸೈಟ್ಗಳನ್ನು ಬೇನಾಮಿ ವ್ಯಕ್ತಿಗಳಿಗೆ ಅಕ್ರಮವಾಗಿ ಹಂಚಿಕೆ ಮಾಡಲಾಗಿದೆ ಎಂದು ಇಡೀ ಅಧಿಕಾರಿಗಳು ತಿಳಿಸಿದ್ದಾರೆ. ಹಾಗಾಗಿ ಸಿಎಂ ಸಿದ್ದರಾಮಯ್ಯ ಅವರಿಗೆ ಈ ಒಂದು ಪ್ರಕರಣ ಮತ್ತಷ್ಟು ಸಂಕಷ್ಟ ದೊಡ್ಡ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.