ಬೆಂಗಳೂರು : ಮುಡಾ ಹಗರಣದಲ್ಲಿ ಸಿಲುಕಿರುವ ಸಿಎಂ ಸಿದ್ದರಾಮಯ್ಯ ಅವರು ಈಗಾಗಲೇ ಸಾಕಷ್ಟು ಸಂಕಷ್ಟಕ್ಕೆ ಒಳಗಾಗಿದ್ದಾರೆ. ಇದರ ಮಧ್ಯ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದ ಕೋಟ್ಯಂತರ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಅವರಿಗೆ ಜಾರಿ ನಿರ್ದೇಶನಾಲಯ (ED) ನೋಟಿಸ್ ನೀಡಿದೆಯಾ ಎಂಬ ಸುದ್ದಿ ಹರಿದಾಡುತ್ತಿದೆ.ಆದರೆ ಇದಕ್ಕೆ ಸಿಎಂ ಕಛೇರಿ ಸ್ಪಷ್ಟನೇ ನೀಡಿದ್ದು ಇದೆಲ್ಲ ಸುಳ್ಳು ಎಂದು ತಿಳಿಸಿದೆ.
ಹೌದು ವಾಲ್ಮೀಕಿ ನಿಗಮ ಪ್ರಕರಣದಲ್ಲಿ ಸಿದ್ದರಾಮಯ್ಯಗೆ ಇಡಿ ನೋಟಿಸ್ ನೀಡಲಾಗಿದೆ ಎಂಬ ಸುದ್ದಿ ಎಲ್ಲೆಡೆ ಹರಿದಾಡುತ್ತಿದೆ. ಆದರೆ ಇದಕ್ಕೆ ಸಿಎಂ ಸಿದ್ದರಾಮಯ್ಯ ಅವರ ಕಚೇರಿ ಸ್ಪಷ್ಟನೆಯನ್ನು ನೀಡಿದೆ. ವಾಲ್ಮೀಕಿ ಹಗರಣದಲ್ಲಿ ಈಗಾಗಲೇ ಮಾಜಿ ಸಚಿವ ಬಿ ನಾಗೇಂದ್ರ ಬಂಧನ ಆಗಿದೆ. ಅವರನ್ನು ಇಡಿ ಬಂಧನಕ್ಕೆ ಒಳಪಡಿಸಿತ್ತು. ಅಲ್ಲದೆ, ನಿಗಮದ ಇತರ ಅಧಿಕಾರಿಗಳನ್ನು ಕೂಡಾ ಬಂಧನ ಮಾಡಲಾಗಿದೆ.
ಅಲ್ಲದೆ ನಿಗಮದ ಇತರ ಅಧಿಕಾರಿಗಳ ಬಂಧನವೂ ಆಗಿದೆ. ಇದೀಗ ಇದೇ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ಅವರಿಗೂ ಇಡಿ ನೋಟಿಸ್ ನೀಡಿದೆ ಎಂಬ ಸುದ್ದಿ ಹರಿದಾಡುತ್ತಿದೆ. ಆದರೆ ಇದರಲ್ಲಿ ಸತ್ಯಾಂಶ ಇಲ್ಲ ಎಂದು ಸಿಎಂ ಕಚೇರಿ ಸ್ಪಷ್ಟನೆಯನ್ನು ನೀಡಿದೆ.ಆದರೆ ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಮುಂದಿನ ಸೆಪ್ಟೆಂಬರ್ 9 ರಂದು ಹೈಕೋರ್ಟ್ ನಲ್ಲಿ ಸಿಎಂ ಸಿದ್ದರಾಮಯ್ಯ ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಯಲಿದ್ದು, ಸಿಎಂ ಭವಿಷ್ಯ ಏನಾಗಲಿದೆ ಎಂದು ರಾಜ್ಯದ ಜನ ಕುತೂಹಲದಿಂದ ಕಾಯುತ್ತಿದ್ದಾರೆ.