ಬೆಂಗಳೂರು : ಮಂತ್ರಿ ಡೆವೆಲಪರ್ಸ್ ಮೇಲೆ ಇಡಿ ದಾಳಿ ಮುಂದುವರಿಸಿದ್ದು, ಮಂತ್ರಿ ಡೆವಲಪರ್ಸ್ ಮಾಲೀಕ ಸುಶೀಲ ಮಂತ್ರಿ ನಿವಾಸದಲ್ಲಿ ಶೋಧ ನಡೆಸುತ್ತಿದ್ದಾರೆ. ಬೆಂಗಳೂರಿನ ಇನ್ಫೆಂಟ್ರಿ ರಸ್ತೆಯಲ್ಲಿರುವ ಸುಶೀಲ್ ಮಂತ್ರಿ ನಿವಾಸದ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ದಾಳಿಯ ವೇಳೆ ದಾಖಲೆ ಪರಿಶೀಲನೆ ನಡೆಸಿದ್ದು, ತನಿಖೆ ಮುಂದುವರೆಸಿದ್ದಾರೆ. ವಿಠಲ್ ಮಲ್ಯ ರಸ್ತೆಯ ಕಚೇರಿ ಮತ್ತು ನಿವಾಸದಲ್ಲಿ ಇಡಿ ಅಧಿಕಾರಿಗಳು ದಾಳಿ ಮಾಡಿ ಪರಿಶೀಲನೆ ನಡೆಸುತ್ತಿದ್ದಾರೆ. ಬೆಳಿಗ್ಗೆ 8 ಘಂಟೆಯಿಂದ ಇಡಿ ಅಧಿಕಾರಿಗಳು ದಾಖಲೆ ಪರಿಶೀಲಿಸುತ್ತಿದ್ದಾರೆ. ಸುಮಾರು 10ಕ್ಕೂ ಹೆಚ್ಚು ಈಡಿ ಅಧಿಕಾರಿಗಳು ಮತ್ತು ಸಿಬ್ಬಂದಿಗಳಿಂದ ದಾಖಲೆಗಳ ಪರಿಶೀಲನೆ ನಡೆಯುತ್ತಿದೆ.








