ಬೆಂಗಳೂರು : ಬೆಂಗಳೂರಿನ ಮಂತ್ರಿ ಬಿಲ್ಡರ್ಸ್ ಮೇಲೆ ED ಅಧಿಕಾರಿಗಳು ಮತ್ತೆ ದಾಳಿ ನಡೆಸಿದ್ದಾರೆ. ದಾಳಿಯ ವೇಳೆ ಹಲವು ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ. ಗ್ರಾಹಕರಿಂದ ಅಪಾರ್ಟ್ಮೆಂಟ್ಗಳಿಗಾಗಿ ಸಂಗ್ರಹಿಸಿದ ಕೋಟ್ಯಂತರ ರೂಪಾಯಿ ಹಣವನ್ನು ಉದ್ದೇಶಿತ ಯೋಜನೆಗಳಿಗೆ ಬಳಸುವ ಬದಲು, ಅಕ್ರಮವಾಗಿ ವಿದೇಶಿ ಹೂಡಿಕೆಗೆ ಅಥವಾ ಇತರ ವೈಯಕ್ತಿಕ ಉದ್ದೇಶಗಳಿಗೆ ಬಳಸಲಾಗಿದೆ ಎಂಬ ಆರೋಪದ ಮೇಲೆ ಈ ದಾಳಿ ನಡೆದಿದೆ.
ಹೌದು ಬೆಂಗಳೂರಿನ ಖ್ಯಾತ ರಿಯಲ್ ಎಸ್ಟೇಟ್ ಕಂಪನಿಯಾದ ‘ಮಂತ್ರಿ ಡೆವಲಪರ್ಸ್’ (Mantri Developers) ಕಚೇರಿಗಳು ಹಾಗೂ ಅದರ ಮಾಲೀಕ ಸುಶೀಲ್ ಮಂತ್ರಿ ಅವರ ನಿವಾಸದ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ದೆಹಲಿಯಿಂದ ಆಗಮಿಸಿದ ಸುಮಾರು 10ಕ್ಕೂ ಹೆಚ್ಚು ಅಧಿಕಾರಿಗಳ ತಂಡವು ಈ ಕಾರ್ಯಾಚರಣೆ ನಡೆಸುತ್ತಿದ್ದು, ಹಣ ವರ್ಗಾವಣೆ ಮತ್ತು ಗ್ರಾಹಕರಿಂದ ಪಡೆದ ಹಣದ ದುರುಪಯೋಗಕ್ಕೆ ಸಂಬಂಧಿಸಿದಂತೆ ಮಹತ್ವದ ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ.








