ಬಳ್ಳಾರಿ : ಬಳ್ಳಾರಿಯಲ್ಲಿ ಬೆಳ್ಳಂಬೆಳಗ್ಗೆ ಇಬ್ಬರು ಗಣಿ ಉದ್ಯಮಿಗಳ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದು, ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ.
ಹೌದು, ಬೆಳ್ಳಂಬೆಳಗ್ಗೆ ಇಂದು ಬಳ್ಳಾರಿಯಲ್ಲಿ ಇಬ್ಬರು ಗಣಿ ಉದ್ಯಮಿಗಳ ಮನೆ ಮೇಲೆ ಏಕಕಾಲದಲ್ಲಿ ಮೂರು ಕಡೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದು, ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ. ಮನೆ ಕಚೇರಿ, ಸ್ಟೀಲ್ ಅಂಗಡಿ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.
ಹೊಸಪೇಟೆ ಪಟ್ಟಣದ ಗಣಿ ಉದ್ಯಮಿ ಸ್ವಸ್ತಿಕ್ ನಾಗರಾಜ್, ನಗರಸಭೆ ಕೈ ಸದಸ್ಯ ಕಾರದಪುಡಿ ಮಹೇಶ್ ಮನೆ ಮೇಲೆ ಇಡಿ ಅಧಿಕಾರಿಗಳು ದಾಳಿ ನಡಸಿದ್ದಾರೆ. ಹೊಸಪೇಟೆ ನಗರದಲ್ಲಿರುವ ಎಂ.ಜೆ. ನಗರದಲ್ಲಿರುವ ಸ್ವಸ್ತಿಕ್ ನಾಗರಾಜ್ ಮನೆ, ಸ್ಟೀಲ್ ಅಂಗಡಿ, ಕಚೇರಿ ಮೇಲೆ ದಾಳಿ ನಡೆಸಲಾಗಿದೆ.
ಇದಕ್ಕೂ ಮುನ್ನ ಕಾಂಗ್ರೆಸ್ ಶಾಸಕ ‘ಸತೀಶ್ ಸೈಲ್’ ನಿವಾಸದ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದು, ದಾಖಲೆಗಳ ಪರಿಶೀಲನೆಯಲ್ಲಿ ತೊಡಗಿದ್ದಾರೆ. ಉತ್ತರ ಕನ್ನಡ ಜಿಲ್ಲೆ ಕಾರವಾರದ ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ನಿವಾಸದ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿ ದಾಖಲೆಗಳ ಪರಿಶೀಲನೆಯಲ್ಲಿ ತೊಡಗಿದ್ದಾರೆ.