ಬೆಂಗಳೂರು : ಮುಡಾ ಹಗರಣಕ್ಕೆ ಸಂಬಂಧ ಪಟ್ಟಂತೆ ಇಡಿ ಅಧಿಕಾರಿಗಳು ತನಿಖೆಯನ್ನು ಚುರುಕುಗೊಳಿಸಿದ್ದು, ಇದೀಗ ಮುಡಾದ ಮಾಜಿ ಆಯುಕ್ತ ನಟೇಶ್ ಮನೆಯ ಮೇಲೆ ಹಾಗೂ ಬಿಲ್ಡರ್ ಮಂಜುನಾಥ್ ನಿವಾಸದ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೇ ನಡೆಸುತ್ತಿದ್ದಾರೆ ಎನ್ನಲಾಗಿದೆ.
ಹೌದು ಮುಡಾ ಹಗರಣಕ್ಕೆ ಸಂಬಂಧಿಸಿದಪಟ್ಟಂತೆ ಬೆಂಗಳೂರಿನ ಮಲ್ಲೇಶ್ವರಂ ನ 10ನೇ ಕ್ರಾಸ್ ನಲ್ಲಿರುವ ಮುಡಾ ಮಾಜಿ ಆಯುಕ್ತ ನಟೇಶ್ ಮನೆ ಮೇಲೆ ಐವರು ಇಡಿ ಅಧಿಕಾರಿಗಳು ದಾಳಿ ಮಾಡಿದ್ದು ಶೋಧ ನಡೆಸುತ್ತಿದ್ದಾರೆ. ಇಡಿ ದಾಳಿಯ ವೇಳೆ ಮಾಜಿ ಆಯುಕ್ತ ನಟೇಶ್ ಮನೆಯಲ್ಲಿ ಇದ್ದರು ಎಂದು ತಿಳಿದುಬಂದಿದೆ.
ಇನ್ನೊಂದು ಕಡೆ ಬಿಲ್ಡರ್ ಮಂಜುನಾಥ್ ನಿವಾಸದ ಮೇಲು ಕೂಡ ಇಡಿ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಬೆಂಗಳೂರಿನ ಜೆಪಿ ನಗರದಲ್ಲಿ ಇರುವ ಬಿಲ್ಡರ್ ಮಂಜುನಾಥ ಮನೆಯ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿ ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ ದಾಖಲೆಗಳು ಪರಿಶೀಲನೆ ಮಾಡುತ್ತಿದ್ದಾರೆ ಎಂದು ತಿಳಿದುಬಂದಿದೆ.