ಗದಗ : ಮುಡಾ ಹಗರಣಕ್ಕೆ ಸಂಬಂಧ ಪಟ್ಟಂತೆ ಇಡಿ ಅಧಿಕಾರಿಗಳು ಲೋಕಾಯುಕ್ತಕ್ಕೆ ಪತ್ರ ಬರೆದಿರುವ ವಿಚಾರವಾಗಿ ಇದೀಗ ಕಾಂಗ್ರೆಸ್ ನಾಯಕರು, ಆಕ್ರೋಶ ಹೊರ ಹಾಕಿದ್ದು, ಸಚಿವ ಕೃಷ್ಣ ಭೈರೇಗೌಡ ಅವರು ಇಡಿ ಎನ್ನುವ ಸೀಳು ನಾಯಿಯನ್ನು ನಮ್ಮ ಮೇಲೆ ಬಿಟ್ಟಿದ್ದಾರೆ ಎಂದು ಕಿಡಿಕಾರಿದ್ದಾರೆ.
ಗದಗದಲ್ಲಿ ಮಾತನಾಡಿದ ಅವರು, ರಾಜಕೀಯ ವಿರೋಧಿಗಳಿಗೆ ಹಿಟ್ ಅಂಡ್ ರನ್ ಮಾಡುವುದು ಅಷ್ಟೆ ಗೊತ್ತಿದೆ. ಕರ್ನಾಟಕದ ಉಪಚುನಾವಣೆಯಲ್ಲಿ 3 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆದ್ದ ಮೇಲೆ ಇವತ್ತು ಬಿಜೆಪಿಯವರಿಗೆ ಸಹಿಸೋಕೆ ಆಗುತ್ತಿಲ್ಲ. ಚುನಾವಣೆಯಲ್ಲಿ ನಮ್ಮನ್ನು ಸೋಲಿಸೋಕೆ ಆಗಲಿಲ್ಲ. ಅದು ಅಸೆಂಬ್ಲಿ ಎಲೆಕ್ಷನ್ ಆಗ್ಲಿಲ್ಲ, ಬೈ ಎಲೆಕ್ಷನಲ್ಲೂ ಆಗಲಿಲ್ಲ ಅದಕ್ಕೆ ಇಡಿ ಎನ್ನುವ ಸೀಳು ನಾಯಿಯನ್ನು ನಮ್ಮ ಮೇಲೆ ಬಿಟ್ಟಿದ್ದಾರೆ ಎಂದು ವಾಗ್ದಾಳಿ ನಡೆಸಿದರು.