ಬೆಂಗಳೂರು : ಇರಾನ್ ಇಸ್ರೇಲ್ ನಡುವೆ ಯುದ್ಧ ನಡೆಯುತ್ತಿದ್ದು, ಇದರ ಪರಿಣಾಮ ಗ್ಯಾಸ್ ಸಿಲಿಂಡರ್, ಪೆಟ್ರೋಲ್, ಡೀಸೆಲ್ ಮೇಲು ಬೀರಿದೆ. ಇದೀಗ ಯಾವುದೇ ಕಾರಣಕ್ಕೂ ಬಸ್ ಟಿಕೆಟ್ ದರ ಏರಿಕೆ ಮಾಡಲ್ಲ ಎಂದು ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.
ಈ ವಿಚಾರವಾಗಿ ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಸಾರಿಗೆ ನಿಗಮಗಳಿಂದ ಬಲ್ಕ್ ನಲ್ಲಿ ಡೀಸೆಲ್ ಖರೀದಿ ಮಾಡುತ್ತಿದ್ದೇವೆ. ಆದರೆ ಟಿಕೆಟ್ ದರ ಜಾಸ್ತಿ ಮಾಡುವುದಿಲ್ಲ ಯುದ್ಧದ ಪರಿಣಾಮದಿಂದ ಬಲ್ಕ್ ನಲ್ಲಿ ಡೀಸೆಲ್ ದರ ಏರಿಕೆಯಾಗಿದೆ. ಆದರೆ ಬಸ್ ಪ್ರಯಾಣ ದರ ಏರಿಕೆ ಮಾಡಲ್ಲ ಎಂದು ಬೆಂಗಳೂರಿನಲ್ಲಿ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದರು.








