ನವದೆಹಲಿ: ಹರಿಯಾಣ, ಮಹಾರಾಷ್ಟ್ರ ಮತ್ತು ಜಾರ್ಖಂಡ್ ವಿಧಾನಸಭಾ ಚುನಾವಣೆಯ ವೇಳಾಪಟ್ಟಿಯನ್ನು ಚುನಾವಣಾ ಆಯೋಗ (ಇಸಿಐ) ಶುಕ್ರವಾರ ಮಧ್ಯಾಹ್ನ 3 ಗಂಟೆಗೆ ಪ್ರಕಟಿಸಲಿದೆ ಎಂದು ಪಿಟಿಐ ವರದಿ ಮಾಡಿದೆ.
ಕೇಂದ್ರಾಡಳಿತ ಪ್ರದೇಶವಾದ ಜಮ್ಮು ಮತ್ತು ಕಾಶ್ಮೀರದಲ್ಲಿ ಚುನಾವಣಾ ವೇಳಾಪಟ್ಟಿಯನ್ನು ಚುನಾವಣಾ ಆಯೋಗ ಪ್ರಕಟಿಸುವ ಸಾಧ್ಯತೆಯಿದೆ.
ಈ ಪ್ರಕಟಣೆಯು ನಾಮಪತ್ರ ಸಲ್ಲಿಕೆ, ಮತದಾನದ ದಿನಗಳು ಮತ್ತು ಫಲಿತಾಂಶಗಳ ಘೋಷಣೆ ಸೇರಿದಂತೆ ಚುನಾವಣಾ ಪ್ರಕ್ರಿಯೆಯ ವಿವಿಧ ಹಂತಗಳ ದಿನಾಂಕಗಳನ್ನು ವಿವರಿಸುತ್ತದೆ