ನವದೆಹಲಿ : ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರ ಮತಗಳ್ಳತನ ಆರೋಪಕ್ಕೆ ಚುನಾವಣಾ ಆಯೋಗ ಪ್ರತಿಕ್ರಿಯೆ ನೀಡಿದ್ದು, ಇದು ಆಧಾರ ರಹಿತವಾದ ಆರೋಪವಾಗಿದೆ ಎಂದು ಪ್ರತಿಕ್ರಿಯೆ ನೀಡಿದೆ.
ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ವಿರುದ್ಧ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಮಾಡಿರುವ ಆರೋಪಗಳು ಆಧಾರರಹಿತ ಮತ್ತು ಸುಳ್ಳು ಎಂದು ಭಾರತೀಯ ಚುನಾವಣಾ ಆಯೋಗ (ಇಸಿಐ) ಹೇಳಿದೆ.
ಕಳೆದ ಚುನಾವಣೆಯ ಸಂದರ್ಭದಲ್ಲಿ ಕರ್ನಾಟಕದ ಆಳಂದ್ ಕ್ಷೇತ್ರದಿಂದ 6,018 ಮತಗಳನ್ನು ಅಳಿಸಲಾಗಿದೆ ಎಂದು ರಾಹುಲ್ ಗಾಂಧಿ ಪತ್ರಿಕಾಗೋಷ್ಠಿಯಲ್ಲಿ ಆರೋಪಿಸಿದ್ದರು. 2023 ರಲ್ಲಿ ಆಳಂದ್‌ನಲ್ಲಿ ಇದೇ ರೀತಿಯ ಪ್ರಯತ್ನ ನಡೆದಿತ್ತು ಎಂದು ಆಯೋಗ ಪ್ರತಿಕ್ರಿಯಿಸಿತು. ಈ ವಿಷಯವನ್ನು ಅದು ಗಮನಕ್ಕೆ ತೆಗೆದುಕೊಂಡಿತ್ತು. ಚುನಾವಣಾ ಆಯೋಗವು ಈ ವಿಷಯದಲ್ಲಿ ಎಫ್‌ಐಆರ್ ದಾಖಲಿಸಿದೆ.
ವಾಸ್ತವವಾಗಿ, 2024 ರ ಲೋಕಸಭಾ ಚುನಾವಣೆಯಲ್ಲಿ ವ್ಯಾಪಕ ಮತ ಕಳ್ಳತನ ನಡೆದಿದೆ ಎಂದು ನವದೆಹಲಿಯ ಇಂದಿರಾ ಭವನ ಸಭಾಂಗಣದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ರಾಹುಲ್ ಗಾಂಧಿ ಹೇಳಿಕೊಂಡಿದ್ದರು. ಕರ್ನಾಟಕದ ಮಹಾದೇವಪುರ ವಿಧಾನಸಭಾ ಕ್ಷೇತ್ರ ಮತ್ತು ಮಹಾರಾಷ್ಟ್ರದ ರಾಜೂರ ವಿಧಾನಸಭಾ ಕ್ಷೇತ್ರವನ್ನು ಅವರು ನಿರ್ದಿಷ್ಟವಾಗಿ ಉಲ್ಲೇಖಿಸಿ, ಅಲ್ಲಿ ಸಾವಿರಾರು ಮತಗಳನ್ನು ತಿರುಚಲಾಗಿದೆ ಎಂದು ಹೇಳಿದರು.
#WATCH | Delhi: Lok Sabha LoP and Congress MP Rahul Gandhi says, "We have started getting help from inside the Election Commission. I am making it clear that we are now getting information from inside the Election Commission, and this is not going to stop…" pic.twitter.com/v7Ojh1CJe8
— ANI (@ANI) September 18, 2025