ನವದೆಹಲಿ: ಚುನಾವಣಾ ಆಯೋಗವು ಇಂದು ಮಧ್ಯಾಹ್ನ 3,30ಕ್ಕೆ ಮಹತ್ವದ ಸುದ್ದಿಗೋಷ್ಠಿ ಕರೆದಿದ್ದು, ಮಹಾರಾಷ್ಟ್ರ, ಜಾರ್ಖಂಡ್ ವಿಧಾನಸಭೆ ಚುನಾವಣೆಗೆ ದಿನಾಂಕ ಘೋಷಿಸುವ ಸಾಧ್ಯತೆ ಇದೆ.
ಮಹಾರಾಷ್ಟ್ರ ಮತ್ತು ಜಾರ್ಖಂಡ್ ವಿಧಾನಸಭಾ ಚುನಾವಣೆಯ ವೇಳಾಪಟ್ಟಿಯನ್ನು ಚುನಾವಣಾ ಆಯೋಗ (ಇಸಿಐ) ಇಂದು ಮಧ್ಯಾಹ್ನ 3,30ಕ್ಕೆ ಸುದ್ದಿಗೋಷ್ಠಿ ನಡೆಸಿ ಪ್ರಕಟಿಸಲಿದೆ ಎಂದು ವರದಿಯಾಗಿದೆ.
ಇನ್ನು ಕರ್ನಾಟಕದ ಸಂಡೂರು, ಶಿಗ್ಗಾಂವಿ, ಚನ್ನಪಟ್ಟಣ ವಿಧಾನಸಭಾ ಕ್ಷೇತ್ರಗಳಿಗೂ ದಿನಾಂಕ ಘೋಷಣೆ ಸಾಧ್ಯತೆ ಇದೆ. ಈ ಪ್ರಕಟಣೆಯು ನಾಮಪತ್ರ ಸಲ್ಲಿಕೆ, ಮತದಾನದ ದಿನಗಳು ಮತ್ತು ಫಲಿತಾಂಶಗಳ ಘೋಷಣೆ ಸೇರಿದಂತೆ ಚುನಾವಣಾ ಪ್ರಕ್ರಿಯೆಯ ವಿವಿಧ ಹಂತಗಳ ದಿನಾಂಕಗಳನ್ನು ವಿವರಿಸುತ್ತದೆ