ಮುಂಬೈ : ಮಹಾರಾಷ್ಟ್ರದ ನೂತನ ಮುಖ್ಯಮಂತ್ರಿಯಾಗಿ ದೇವೇಂದ್ರ ಫಡ್ನವಿಸ್ ಅವರನ್ನು ಆಯ್ಕೆ ಮಾಡಲಾಗಿದ್ದು, ಶಾಸಕಾಂಗ ಪಕ್ಷದ ಸಭೆಯ ನಂತರ ಬಿಜೆಪಿ ತನ್ನ ಮಿತ್ರಪಕ್ಷಗಳ ಪ್ರಮುಖ ನಾಯಕರೊಂದಿಗೆ ಮಧ್ಯಾಹ್ನ 3.30 ಕ್ಕೆ ರಾಜ್ಯಪಾಲರ ಬಳಿಗೆ ತಮ್ಮ ಬೆಂಬಲ ಪತ್ರದೊಂದಿಗೆ ಹೋಗಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
Devendra Fadnavis unanimously elected as the Leader of Maharashtra BJP Legislative Party. pic.twitter.com/015hrTDxtn
— ANI (@ANI) December 4, 2024
ಶಾಸಕರ ಸಭೆಯಲ್ಲಿ ದೇವೇಂದ್ರ ಫಡ್ನವೀಸ್ ಹೆಸರಿನಲ್ಲಿ ಪ್ರಸ್ತಾವನೆ ತರಲು ಬಿಜೆಪಿ ಕೋರ್ ಕಮಿಟಿಯಲ್ಲಿ ತೀರ್ಮಾನಿಸಲಾಗಿದೆ. ಸುಧೀರ್ ಮುಂಗಂತಿವಾರ್ ಮತ್ತು ಚಂದ್ರಕಾಂತ್ ಪಾಟೀಲ್ ಇಬ್ಬರೂ ದೇವೇಂದ್ರ ಫಡ್ನವಿಸ್ ಹೆಸರನ್ನು ಪ್ರಸ್ತಾಪಿಸದ್ದಾರೆ. ಸುಧೀರ್ ಮುಂಗಂತಿವಾರ್ ಮತ್ತು ಚಂದ್ರಕಾಂತ್ ಪಾಟೀಲ್ ಇಬ್ಬರೂ ದೇವೇಂದ್ರ ಫಡ್ನವಿಸ್ ಹೆಸರನ್ನು ಪ್ರಸ್ತಾಪಿದ್ದಾರೆ.
ಮುಖ್ಯಮಂತ್ರಿ ಆಯ್ಕೆಗಾಗಿ ಭಾರತೀಯ ಜನತಾ ಪಕ್ಷವು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮತ್ತು ಗುಜರಾತ್ ಮಾಜಿ ಸಿಎಂ ವಿಜಯ್ ರೂಪಾನಿ ಅವರನ್ನು ಮಹಾರಾಷ್ಟ್ರ ಶಾಸಕಾಂಗ ಪಕ್ಷದ ಸಭೆಗೆ ವೀಕ್ಷಕರನ್ನಾಗಿ ಮಾಡಿದೆ.
ಮಹಾರಾಷ್ಟ್ರದ ಹೊಸ ಸರ್ಕಾರ ಡಿಸೆಂಬರ್ 5 ರಂದು ಪ್ರಮಾಣ ವಚನ ಸ್ವೀಕರಿಸಲಿದೆ. ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಮಹಾಯುತಿ ಮೈತ್ರಿಕೂಟ ಭರ್ಜರಿ ಗೆಲುವು ದಾಖಲಿಸಿದೆ. ಮೈತ್ರಿಕೂಟ 230 ವಿಧಾನಸಭಾ ಸ್ಥಾನಗಳನ್ನು ಗೆದ್ದಿದೆ. ಇದರಲ್ಲಿ ಬಿಜೆಪಿ ಗರಿಷ್ಠ 132 ಸ್ಥಾನಗಳನ್ನು ಪಡೆದಿದೆ. ಏಕನಾಥ್ ಶಿಂಧೆ ಅವರ ಶಿವಸೇನೆ 57 ಸ್ಥಾನಗಳಲ್ಲಿ ಮತ್ತು ಅಜಿತ್ ಪವಾರ್ ಅವರ ಎನ್‌ಸಿಪಿ 41 ಸ್ಥಾನಗಳನ್ನು ಗೆದ್ದಿದೆ.
ದೇವೇಂದ್ರ ಫಡ್ನವಿಸ್ ಹಿನ್ನೆಲೆ
ದೇವೇಂದ್ರ ಗಂಗಾಧರರಾವ್ ಫಡ್ನವಿಸ್ 22 ಜುಲೈ 1970 ಜನಿಸಿದ್ದು, ಒಬ್ಬ ಭಾರತೀಯ ರಾಜಕಾರಣಿಯಾಗಿದ್ದು, ಸದ್ಯ ಅವರು ಮಹಾರಾಷ್ಟ್ರದ ನೂತನ ಮುಖ್ಯಮಂತ್ರಿಯಾಗಿ ಆಯ್ಕೆಯಾಗಿದ್ದಾರೆ. ಅವರು ಈ ಹಿಂದೆ 31 ಅಕ್ಟೋಬರ್ 2014 ರಿಂದ 12 ನವೆಂಬರ್ 2019 ರವರೆಗೆ ಮಹಾರಾಷ್ಟ್ರದ ಮುಖ್ಯಮಂತ್ರಿ ಸ್ಥಾನವನ್ನು ಹೊಂದಿದ್ದರು. 2019 ರಿಂದ 2022 ರವರೆಗೆ ಅವರು ಮಹಾರಾಷ್ಟ್ರ ವಿಧಾನಸಭೆಯಲ್ಲಿ ವಿರೋಧ ಪಕ್ಷದ ನಾಯಕರಾಗಿ ಸೇವೆ ಸಲ್ಲಿಸಿದರು . ಅವರು 2013 ರಿಂದ 2015 ರವರೆಗೆ ಬಿಜೆಪಿಯ ಮಹಾರಾಷ್ಟ್ರ ರಾಜ್ಯ ಘಟಕದ ಅಧ್ಯಕ್ಷರಾಗಿದ್ದರು.