ರಾಮನಗರ : ಮಾಜಿ ಸಿಎಂ ಕುಮಾರಸ್ವಾಮಿ ಅವರ ತೋಟಕ್ಕೆ ಚುನಾವಣಾಧಿಕಾರಿಗಳು ದಾಳಿ ನಡೆಸಿದ್ದು, ಪರಿಶೀಲನೆ ನಡೆಸಿದ್ದಾರೆ.
ಬಿಡದಿಯ ಸಮೀಪವಿರುವ ಕೇತಗಾನಹಳ್ಳಿಯಲ್ಲಿರುವ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಅವರ ತೋಟದ ಮನೆಗೆ ಚುನಾವಣಾಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.
ಇಂದು ಮೈತ್ರಿ ನಾಯಕರಿಂದ ಭೋಜನಾ ಕೂಟ ಆಯೋಜಿಸಲಾಗಿದ್ದು, ಚುನಾವಣೆ ನೀತಿ ಸಂಹಿತೆ ಹಿನ್ನೆಲೆಯಲ್ಲಿ ಚುನಾವಣಾಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.
ಈ ನಡುವೆ ಕಾಂಗ್ರೆಸ್ ಪಕ್ಷ ಪ್ರತಿಕ್ರಿಯೆ ನೀಡಿದ್ದು, ಜೆಡಿಎಸ್ ಪಕ್ಷದ ಹೆಡ್ಡಾಫೀಸ್ನಂತಿರುವ ಬಿಡದಿ ತೋಟದ ಮನೆಯಿಂದ ಮದ್ಯ ಹಾಗೂ ಬಾಡೂಟದ ಘಮಲು ಹೊರಬರುತ್ತಿದೆಯಂತೆ? ಸೋಲಿನ ಭೀತಿಯಿಂದ ಹೊಸ್ತೊಡಕಿನ ಹೆಸರಲ್ಲಿ ಮತದಾರರಿಗೆ, ಕಾರ್ಯಕರ್ತರಿಗೆ ಬಾಡೂಟದ ವ್ಯವಸ್ಥೆ ಮಾಡಿರುವ ಕುರಿತು ಮಾಹಿತಿಗಳಿದ್ದರೂ Chief Electoral Officer Karnataka ಅವರು ಕಣ್ಣಿಗೆ ಬಟ್ಟೆ ಕಟ್ಟಿಕೊಂಡು ಕೂತಿರುವುದೇಕೆ?
ಸೋಲಿನ ಭಯದಲ್ಲಿರುವ ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳು ಮದ್ಯ, ಮಾಂಸದ ರುಚಿ ತೋರಿಸಿ ಮತ ಕೇಳಲು ಮುಂದಾಗಿವೆಯೇ?
ರಾಮನಗರ ಅಪರ ಜಿಲ್ಲಾ ಚುನಾವಣಾಧಿಕಾರಿಗಳು ಬಾಡೂಟದ ಆಮಿಷವನ್ನು ತಡೆಯದೇ ವಾಮಮಾರ್ಗದ ಚುನಾವಣೆಗೆ ಬೆಂಬಲ ನೀಡುತ್ತಿದ್ದಾರೆಯೇ? ಎಂದು ಕಿಡಿಕಾರಿದೆ.