ಬಾಗಲಕೋಟೆ : ಬಾಗಲಕೋಟೆ ಹಾಗೂ ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣೆ ದಿನಾಂಕ ಘೋಷಣೆ ಬೆನ್ನಲ್ಲೇ, ಬಾಗಲಕೋಟೆಯಲ್ಲಿ ದಾಖಲೆ ಇಲ್ಲದೆ ಸಾಗಿಸುತ್ತಿದ್ದ 15.50 ಲಕ್ಷ ರೂಪಾಯಿ ಹಣವನ್ನು ಜಪ್ತಿ ಮಾಡಿಕೊಳ್ಳಲಾಗಿದೆ. ದಾಖಲೆ ಇಲ್ಲದೆ ಸಾಗಿಸುತ್ತಿದ್ದ 15.50 ಲಕ್ಷ ರೂಪಾಯಿಗಳನ್ನು ಇದೀಗ ಸೀಜ್ ಮಾಡಿಕೊಳ್ಳಲಾಗಿದೆ.
ನಾಯನಗೇಲಿ ಚೆಕ್ ಪೋಸ್ಟ್ ನಲ್ಲಿ 15.50 ಲಕ್ಷ ಜಪ್ತಿ ಮಾಡಿಕೊಳ್ಳಲಾಗಿದೆ. ವಿಜಯಕುಮಾರ್ ಎನ್ನುವವರು ಈ ಹಣವನ್ನು ಸಾಗಿಸುತ್ತಿದ್ದರು. ವಿಜಯಪುರದಿಂದ ಕುಷ್ಟಗಿ ಕಡೆಗೆ ಕಾರು ತೆರಳುತ್ತಿತ್ತು. ಈ ವೇಳೆ ಹಣ ಜಪ್ತಿ ಮಾಡಿ ಚುನಾವಣಾ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ.








